ಮೈಸೂರು

ಸಮಸ್ಯೆ ಎದುರಿಸುವ ಸಾಮರ್ಥ್ಯ ಮಹಿಳೆಯರು ಬೆಳೆಸಿಕೊಳ್ಳಲಿ

Published On :

ಮೈಸೂರು: ಸಮಾಜದಲ್ಲಿ ಬರುವ ತೊಡಕುಗಳನ್ನು ಎದುರಿಸುವ ಸಾಮರ್ಥ್ಯವನ್ನು ಮಹಿಳೆಯರು ಬೆಳೆಸಿಕೊಳ್ಳಬೇಕೆಂದು ಮೈಸೂರು ಆಕಾಶವಾಣಿಯ ಉಪ ನಿರ್ದೇಶಕ ಆನಂದ್ ವಿ. ಪಾಟೀಲ್ ಹೇಳಿದರು.
ನಗರದ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಕಾರಂಜಿ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಸಂಶೋಧನಾ ನಿಯತಕಾಲಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಹತ್ತಿರವಾಗುವುದಕ್ಕೆ ಇಂತಹ ಕಾರ್ಯಕ್ರಮ ಮುಖ್ಯವಾದವು, ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪೂರಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ರೋಟರಿ ಸಂಸ್ಥೆಯ ರಾಮದಾಸ್ ಮಾತನಾಡಿದರು. ಕಾಲೇಜಿನ ಶೈಕ್ಷಣಿಕ ಡೀನ್ ಡಾ. ಎಚ್.ಸಿ. ಹೊನ್ನಪ್ಪ ಕಾಲೇಜಿನಿ ಕಿರು ಪರಿಚಯವನ್ನು  ನೀಡಿದರು. ಪ್ರಥಮ ಪದವಿ ವಿದ್ಯಾರ್ಥಿನಿಯರಿಗೆ ಸಾಂಕೇತಿಕವಾಗಿ ಪುಷ್ಪ ನೀಡಿ ಸ್ವಾಗತಿಸಿದರು. ಇದೇ ವೇಳೆ ಪ್ರಥಮ ಪದವಿ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆ ಹಂಚಿಕೊಂಡರು.
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ಹೆಚ್ಚುವರಿ ನಿರ್ದೇಶಕ ಮೃತ್ಯುಂಜಯ ಪಿ. ಕುಳೇನೂರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿನಿಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.