ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ
ಪಿರಿಯಾಪಟ್ಟಣ: ಮಹಿಳೆಯರ ಹಾಗೂ ಮಕ್ಕಳ ಮೇಲಾಗುತ್ತಿರುವ ಅತ್ಯಾಚಾರ ಹಾಗೂ ತಾಲೂಕಿನ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ತಳವಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಬಸವೇಶ್ವರ ವೃತ್ತದಿಂದ ಸಂಘಟನೆಯ ಕಾರ್ಯಕರ್ತರು ತಾಲೂಕು ಆಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಎಚ್.ಎನ್. ಸತೀಶ್‌ಗೌಡ ಮಾತನಾಡಿ, ರಾಜ್ಯಾದ್ಯಂತ ಬಾಲಕಿಯರ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರದಿಂದಾಗಿ ಮಹಿಳೆಯರು ಹೊರಗೆ ಓಡಾಡಲೂ ಭಯಪಡುವಂತಾಗಿದೆ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿದರು. ತಾಲೂಕು ಅಧ್ಯಕ್ಷ ಕುಮಾರ್ ಮಾತನಾಡಿ, ಪಟ್ಟಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಬಡಜನರು ಯಾವುದೇ ದಾಖಲಾತಿಗಳನ್ನು ಪಡೆಯಲು ತಿಂಗಳುಗಟ್ಟಲೆ ಅಲೆಯುವಂತಾಗಿದೆ ಎಂದು ಆರೋಪಿಸಿದರು. ಸಂಘಟನೆಯ ಪದಾಧಿಕಾರಿಗಳಾದ ಕೆ. ಬೀರೇಶ್, ಮುರುಳಿ, ಹಿನಕಲ್ ಗುರು, ಕುಮಾರ, ಸ್ವಾಮಿನಾಯಕ, ಶಿವರುದ್ರಪ್ಪ, ದೀಪು, ಸಯ್ಯದ್ ಇಮ್ರಾನ್, ಚಂದ್ರಕುಮಾರ್, ಅನೂಪ್, ಪ್ರೇಮ್, ಮೋಹನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

