ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಿ
ಕೆ.ಆರ್.ನಗರ: ಕ್ರೀಡೆಗಳಲ್ಲಿ ಭಾಗವಹಿಸುವವರು ಪ್ರಶಸ್ತಿ ಮತ್ತು ಪದಕಗಳನ್ನು ಗೆಲ್ಲುವ ಆಸೆಯಿಂದ ಭಾಗವಹಿಸದೆ, ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಗೆಡವಿ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಲು ಪಾಲ್ಗೊಳ್ಳಬೇಕು ಎಂದು ತಾಪಂ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ ಕರೆ ನೀಡಿದರು.
ಪಟ್ಟಣದ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ನಡೆದ ಕಸಬಾ ಹೋಬಳಿ ಮಟ್ಟದ ವಲಯ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೋಷಕರು ತಮ್ಮ ಮಕ್ಕಳನ್ನು ಶಿಕ್ಷಣಕ್ಕೆ ಸೀಮಿತಗೊಳಿಸದೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳುವಂತೆ ಹುರಿದುಂಬಿಸಬೇಕು ಎಂದರು.
ಇಂದಿನ ಯುವ ಜನತೆ ಕ್ರಿಕೆಟ್ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು, ಇದರ ಜತೆಗೆ ಇತರೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮತ್ತು ದೇಶಿಯ ಕ್ರೀಡೆಗಳ ಬಗ್ಗೆಯೂ ಆಸಕ್ತಿ ವಹಿಸಬೇಕು. ಅವುಗಳನ್ನು ಕಲಿತು ತಮ್ಮ ಪ್ರತಿಭೆ ಪ್ರದರ್ಶಿಸಬೇಕು. ಸಾರ್ವಜನಿಕರು ಕ್ರೀಡಾ ಪ್ರತಿಭೆ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು. ಸರ್ಕಾರಗಳು ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡಲು ಮತ್ತು ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಅಗತ್ಯ ಆರ್ಥಿಕ ಸಹಕಾರ ನೀಡಲು ಮುಂದಾಗಬೇಕು. ಆ ಮೂಲಕ ದೇಶದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಗ್ರಾಮಾಂತರ ಪ್ರದೇಶದಲ್ಲಿ ಅಡಗಿರುವ ಕ್ರೀಡಾಳುಗಳನ್ನು ಗುರುತಿಸಬೇಕು ಎಂದರು.
ಹೋಬಳಿಯ 20 ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ತಾಲೂಕಿನ ಕಾಮೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಕ್ರೀಡಾಕೂಟ ಆಯೋಜಿಸಲಾಗಿತ್ತು. ಪುರಸಭೆ ಅಧ್ಯಕ್ಷೆ ಪಾರ್ವತಿ ನಾಗರಾಜು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ತಾಪಂ ಉಪಾಧ್ಯಕ್ಷೆ ಲಕ್ಷ್ಮೀ ಕನಕರಾಜು, ಪುರಸಭಾ ಉಪಾಧ್ಯಕ್ಷೆ ಕವಿತಾ ವಿಜಯಕುಮಾರ್, ಬಿಇಒ ಗಾಯತ್ರಿ ಮಾತನಾಡಿದರು. ಶಿಕ್ಷಣ ಸಂಯೋಜಕ ನಾಗೇಶ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಂಗಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವಿಜಯಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಪಿ. ಮಧುರದಾಸ್, ಸಿಆರ್ಪಿ ಪುರುಷೋತ್ತಮ್ಮ, ಮುಖ್ಯ ಶಿಕ್ಷಕ ರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

