ನ್ಯಾಯಾಲಯ ಕಟ್ಟಡಗಳಿಗೆ ಶಿಲಾನ್ಯಾಸ ಆ.3ಕ್ಕೆ
ಪಿರಿಯಾಪಟ್ಟಣ: ಪಟ್ಟಣದಲ್ಲಿ ಹಿರಿಯ ಶ್ರೇಣಿ ಹಾಗೂ ಕಿರಿಯ ಶ್ರೇಣಿ ನ್ಯಾಯಾಲಯದ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಆ.3 ರಂದು ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶೆ ಕೆ.ಎಸ್. ಮುದಗಲ್ ಹೇಳಿದರು.
ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಿಜೆಎಂ ಮೈಸೂರು ನ್ಯಾಯಾಧೀಶ ಜೆ.ಆರ್. ಮೆಂಡೋನ್ಕಾ, ಹಿರಿಯ ಶ್ರೇಣಿ ಹಾಗೂ ಅಪರ ಸಣ್ಣ ವ್ಯಾಜ್ಯಗಳ ಜಿಲ್ಲಾ ನ್ಯಾಯಾಧೀಶರು, ಕಾನೂನು ಸೇವೆಗಳ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಹೆಗಡೆ, ಪಿರಿಯಾಪಟ್ಟಣ ಹಿರಿಯ ಶ್ರೇಣಿ ನ್ಯಾಯಾಧೀಶೆ ಬಿ.ಎಂ. ಶೈಲಾ, ಕಿರಿಯ ಶ್ರೇಣಿ ನ್ಯಾಯಾಧೀಶ ವಿ. ಹನುಮಂತಪ್ಪ ಪಾಲ್ಗೊಳ್ಳುವರು. ಶಾಸಕ ಕೆ. ವೆಂಕಟೇಶ್ ಅಧ್ಯಕ್ಷತೆ ವಹಿಸುವರು.
ವಕೀಲರ ಸಂಘದ ಅಧ್ಯಕ್ಷ ಬಿ.ಎಂ.ಕುಮಾರ್, ಪದಾಧಿಕಾರಿಗಳಾದ ಬಿ.ನಟರಾಜ್, ಎಂ.ಸಿ.ಹರೀಶ್, ಬಿ.ವಿ. ಜವರೇಗೌಡ, ದೇವರಾಜೇ ಅರಸ್, ಸಿ.ಕೆ.ಮಂಜುನಾಥ್, ಗೋವಿಂದೇಗೌಡ, ಪುರುಷೋತ್ತಮ್, ಹೆಮ್ಮಿಗೆ ಗೋವಿಂದೇಗೌಡ, ಜಗದೀಶ್, ಉಮೇಶ್, ಕರುಣಾಕರ್, ಕೆ.ಭಾಸ್ಕರ್, ಚಿಕ್ಕಣ್ಣನಾಯಕ, ಪ್ರಕಾಶ್, ಸುಭಾಷ್, ಹೆಮ್ಮಿಗೆ ಶ್ರೀನಿವಾಸ್, ಜೆ.ಎಸ್. ನಾಗರಾಜ್, ಮಂಜುನಾಥಸ್ವಾಮಿ, ನಾಗರಾಜು, ಕಿರಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

