ಮೈಸೂರು

ಎಂಇಎಸ್ ಗೂಂಡಾವರ್ತನೆ ವಿರುದ್ಧ ಧರಣಿ

Published On :

ಮೈಸೂರು: ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮದಲ್ಲಿ ಎಂಇಎಸ್ ಮತ್ತು ಶಿವಸೇನೆಯವರ ಗೂಂಡಾವರ್ತನೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಹಿತರಕ್ಷಣಾ ವೇದಿಕೆಯವರು ನಗರದಲ್ಲಿ ಶನಿವಾರ ಪ್ರತ್ಯೇಕವಾಗಿ ಪ್ರತಿಭಟಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಕರವೇ ಕಾರ್ಯಕರ್ತರು, ಎಂಇಎಸ್ ಮತ್ತು ಶಿವಸೇನೆಯ ಪ್ರತಿಕೃತಿ ದಹಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹೈಕೋರ್ಟ್ ಆದೇಶದಂತೆ ಮರಾಠಿ ನಾಮಫಲಕವನ್ನು ಸರ್ಕಾರಿ ಅಧಿಕಾರಿಗಳು ತೆರವುಗೊಳಿಸಿದ್ದರು. ಇದನ್ನು ಖಂಡಿಸಿ ಪ್ರತಿಭಟಿಸಿದ ಶಿವಸೇನೆ ಮತ್ತು ಎಂಇಎಸ್ ಗೂಂಡಾಗಳು, ರಾಜ್ಯದ 5 ಬಸ್‌ಗಳನ್ನು ಧ್ವಂಸಗೊಳಿಸಿ ಪ್ರಯಾಣಿಸುತ್ತಿದ್ದ ಕನ್ನಡಿಗರ ಮೇಲೆ ಹಲ್ಲೆ ನಡೆಸಿರುವುದು ಖಂಡನಿಯ. ಎಂಇಎಸ್, ಶಿವಸೇನೆ ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು. ಕರವೇ ನಗರಾಧ್ಯಕ್ಷ ಕೆ. ಮಾದೇಶ್, ಮುಖಂಡರಾದ ಚಿಕ್ಕಪುಟ್ಟಿ, ಕೃಷ್ಣಕುಮಾರ್, ಪಾಟೀಲ್, ಮಂಜುನಾಥ್ ಇದ್ದರು.
ಕನ್ನಡ ಹಿತರಕ್ಷಣಾ ವೇದಿಕೆ: ನಗರದ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟಿಸಿದ ಕನ್ನಡ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು, ಎಂಇಎಸ್ ಮತ್ತು ಶಿವಸೇನೆಯವರು ಬೆಳಗಾವಿಯಲ್ಲಿ ಬಸ್ ಧ್ವಂಸಗೊಳಿಸಿ ಕನ್ನಡಿಗರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿದರು.
ರಾಜ್ಯ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಂಡು, ಎಂಇಎಸ್ ಮತ್ತು ಶಿವಸೇನೆ ಕಾರ್ಯಕರ್ತರನ್ನು ಗೂಂಡಾ ಕಾಯ್ದೆ ಅನ್ವಯ ಬಂಧಿಸಬೇಕು. ಈ ಎರಡು ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ವೇದಿಕೆಯ ಅಧ್ಯಕ್ಷ ವಿ.ವಿನಯ್‌ಕುಮಾರ್, ಗೌರವಾಧ್ಯಕ್ಷ ವೀರಣ್ಣಗೌಡ, ಮುಖಂಡರಾದ ದೇವರಾಜ್ ಟಿ. ಕಾಟೂರು, ಚಂದ್ರಕಾಂತ್‌ಗೌಡ, ಚೇತನ್, ರವಿ, ಶ್ರೀನಿವಾಸ್, ಇಲಿಯಾಸ್, ಮಹೇಶ್, ಲಕ್ಷ್ಮಣ್, ಅನಿಲ್, ಮಂಜು, ನಿಶಾತ್, ದಿಲೀಪ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.