ಮೈಸೂರು

ಅಬಕಾರಿ ಕಚೇರಿ ಎದುರು ಮದ್ಯ ಮಾರಾಟಗಾರರ ಧರಣಿ

Published On :

ಹುಣಸೂರು: ಹುಣಸೂರು ಉಪವಿಭಾಗದ ಅಬಕಾರಿ ಉಪಅಧೀಕ್ಷಕರು ಮದ್ಯ ಮಾರಾಟಗಾರರಿಗೆ ಕಾರಣವಿಲ್ಲದೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ, ಹುಣಸೂರು, ಕೆ.ಆರ್. ನಗರ, ಪಿರಿಯಾಪಟ್ಟಣ, ಎಚ್.ಡಿ.ಕೋಟೆ ತಾಲೂಕಿನ ಮದ್ಯ ಮಾರಾಟಗಾರರ ಸಂಘವು ಒಂದು ದಿನ ಬಂದ್ ಆಚರಿಸಿ ಹಾಗೂ ಪ್ರತಿಭಟನಾ ಧರಣಿ ನಡೆಸಿದರು.
ಮದ್ಯದಂಗಡಿ ಸಂಘದ ರಾಜ್ಯಾಧ್ಯಕ್ಷ ಗುರುಸ್ವಾಮಿ ಮಾತನಾಡಿ, ಅಬಕಾರಿ ಉಪ ಅಧೀಕ್ಷಕ ನಾಗಶಯನ ಅವರು ಹುಣಸೂರು ಸಂಘದ ಅಧ್ಯಕ್ಷ ಚಿನ್ನಸ್ವಾಮಿ ಅವರಿಗೆ ಕಾರಣವಿಲ್ಲದೇ ನಿಂದಿಸಿದ್ದಾರೆ. ಅಲ್ಲದೇ ಅವರ ಮೇಲೆ ಇಲ್ಲಸಲ್ಲದ ಅಪರಾಧಗಳನ್ನು ಹೊರಿಸಿದ್ದಾರೆ. ಅಂಗಡಿ ಮಾಲೀಕರಿಗೆ ಕಿರುಕುಳ ಹಾಗೂ ಲಂಚಕ್ಕಾಗಿ ಪೀಡಿಸುತ್ತಿದ್ದಾರೆ. ಇದರಿಂದ ನಮ್ಮ ವ್ಯವಹಾರ ನಡೆಸಲು ತೊಂದರೆಯಾಗುತ್ತಿದ್ದು, ಕೂಡಲೇ ಇವರನ್ನು ಅಮಾನತುಗೊಳಿಸಬೇಕು ಹಾಗೂ ಇಲಾಖಾ ತನಿಖೆ ನಡೆಸಿ ಕಾನೂನುಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ತಾಲೂಕು ಅಧ್ಯಕ್ಷ ಚಿನ್ನಸ್ವಾಮಿ, ಕಾರ್ಯದರ್ಶಿ ಶ್ರೀನಿವಾಸ್, ಉಪಾಧ್ಯಕ್ಷ ಎಚ್.ಎನ್. ಕುಮಾರ್ ಮಾತನಾಡಿದರು. ಮುಖಂಡರಾದ ರಾಮಲಿಂಗಯ್ಯ, ಶಿವಯ್ಯ, ಗಣೇಶಗೌಡ, ಎಚ್.ವೈ. ಮಹದೇವ್, ಲಕ್ಷ್ಮಣ, ರಾಜಣ್ಣ, ದೊಡ್ಡನಾಯ್ಕ, ಜಯರಾಂ, ಕುಂಬಣ್ಣ ಕರ್ನಲ್, ಪಿ.ವೈ.ಮಲ್ಲೇಶ್, ನಾಗರಾಜ್, ಎನ್.ವಿ. ಕೃಷ್ಣಪ್ಪ ಸೇರಿದಂತೆ 300ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ವಿಷಯ ತಿಳಿದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಬಕಾರಿ ಡಿಸಿ ಶಿವನಗೌಡ ಸನ್ನದುದಾರರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಮೇಲಧಿಕಾರಿಗಳಿಗೆ ವಿಷಯ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನೀಡಿದ ಭರವಸೆ ಮೇರೆಗೆ ಸನ್ನದುದಾರರು ಪ್ರತಿಭಟನೆ ಹಿಂಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.