ಮೈಸೂರು

ರಾಜ್ಯದ ಹಿತಕ್ಕೆ ಒಗ್ಗಟ್ಟಿನ ಹೋರಾಟ: ಸಂಸದ ಧ್ರುವ

Published On :

ಬನ್ನೂರು: ರಾಜ್ಯದ ನೆಲ, ಜಲದ ವಿಚಾರದಲ್ಲಿ ಸಂಸದರೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡುತ್ತೇವೆ ಎಂದು ಚಾಮರಾಜನಗರ ಸಂಸದ ಆರ್.ಧ್ರುವನಾರಾಯಣ ಅಭಯ ನೀಡಿದರು.
ಭಾನುವಾರ ಆರಂಭವಾದ ಮೈಸೂರು ಜಿಲ್ಲಾ 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಬೇಕು ಎಂಬ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಕ್ಯಾತೆಯ ವಿರುದ್ಧ ರಾಜ್ಯದ ಸಂಸದರು ಹಾಗೂ ಕೇಂದ್ರದಲ್ಲಿ ರಾಜ್ಯ ಪ್ರತಿನಿಧಿಸುವ ಸಚಿವರು ಒಗ್ಗಟ್ಟಿನ ಹೋರಾಟ ಮಾಡಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಅದಕ್ಕೆ ಸಮ್ಮತಿಸಲಿಲ್ಲ ಎಂದರು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಲು ಹಿಂದಿನ ಯುಪಿಎ ಸರ್ಕಾರ ಕಾರಣ. ಅನುದಾನ ನೀಡಿಕೆಯಲ್ಲಿ ಕನ್ನಡಕ್ಕೆ ಅನ್ಯಾಯವಾಗಿದೆ ಎಂಬುದು ತುಮಕೂರು ಸಂಸದರಿಗೆ ಲೋಕಸಭೆಯಲ್ಲಿ ನೀಡಿದ ಉತ್ತರದಿಂದ ಬಯಲಾಗಿದೆ. ಈ ವಿಷಯದಲ್ಲೂ ನಾವು ಒಗ್ಗಟ್ಟಿನ ಹೋರಾಟ ಮಾಡಿ, ಕನ್ನಡಕ್ಕೆ ಹೆಚ್ಚಿನ ಅನುದಾನ ಸಿಗುವಂತೆ ನೋಡಿಕೊಳ್ಳುತ್ತೇವೆ ಎಂದರು.
ಸಿಎಫ್‌ಟಿಆರ್‌ಐ ಬಗ್ಗೆ ಕ್ರಮ: ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ ಕನ್ನಡ ವಾತಾವರಣ ಇಲ್ಲ ಎಂಬ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಚಂದ್ರಶೇಖರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಧ್ರುವನಾರಾಯಣ, ಈ ಬಗ್ಗೆ ಚರ್ಚೆ ನಡೆಸುತ್ತೇನೆ. ರಾಜ್ಯದಲ್ಲಿರುವ ಕೇಂದ್ರೀಯ ಸಂಸ್ಥೆಗಳಲ್ಲೂ ಕನ್ನಡದ ಮೇಲೆ ದೌರ್ಜನ್ಯ ನಡೆಯಲು ಬಿಡುವುದಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.