ಮೈಸೂರು

ಇತರರಿಗೆ ತ್ಯಾಗ ಮಾಡಿದ ಅಂಬೇಡ್ಕರ್

Published On :

ಪಿರಿಯಾಪಟ್ಟಣ: ಡಾ.ಬಿ.ಆರ್. ಅಂಬೇಡ್ಕರ್ ಅವರುತಮ್ಮ ಜೀವನದುದ್ದಕ್ಕೂ ಇತರರ ಹಿತಕ್ಕೋಸ್ಕರ ಜೀವನ ತ್ಯಾಗ ಮಾಡಿದರು ಎಂದು ಹೊಳೆನರಸೀಪುರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿಜ್ಞಾನ ವಿಭಾಗದ ಮುಖ್ಯಸ್ಥ ಎನ್. ಆರ್. ಶಿವರಾಂ ಹೇಳಿದರು.
ಪಟ್ಟಣದ ಕೆ.ಆರ್. ಫಂಕ್ಷನ್ ಹಾಲ್‌ನಲ್ಲಿ ಪ್ರಬುದ್ಧ ಭಾರತ ಮಾಸಪತ್ರಿಕೆಯ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಸರ್ಕಾರಿ ನೌಕರರ ಸಂಘ, ಬಹುಜನ ವಿದ್ಯಾರ್ಥಿ ಸಂಘದಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದು ತೇರ್ಗಡೆಯಾದ ಎಸ್ಸಿ, ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ನಿತ್ಯವೂ ಬೇರೆಯವರ ಹಿತಕ್ಕಾಗಿಯೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅವರ ಪ್ರತಿಮೆಗಳಿಗೆ ಯಾರೇ ಅವಮಾನ ಮಾಡಿದರೂ ಸಹಿಸಲು ಸಾಧ್ಯವಿಲ್ಲ. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನ ಸರ್ವ ಜನಾಂಗದವರನ್ನೂ ಸೌಹಾರ್ದತೆ, ಪ್ರೀತಿಯಿಂದ ಕೊಂಡೊಯ್ಯುತ್ತಿದೆ. ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನೂ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನದಲ್ಲಿ ಮುಂದೆ ಬರುವಂತೆ ತಿಳಿಸಿದರು. ಮೈಸೂರು ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧಕ ಡಾ.ಶಿವಕುಮರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕರಿಗೌಡ ಮಾತನಾಡಿದರು. ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾಪಂ ಸದಸ್ಯ ರಘುನಾಥ್, ತಾಪಂ ಮಾಜಿ ಅಧ್ಯಕ್ಷ ರಾಮು, ಪಪಂ ಮಾಜಿ ಅಧ್ಯಕ್ಷ ತಿಮ್ಮನಾಯಕ, ಪ್ರಬುದ್ಧ ಭಾರತ ಮಾಸಪತ್ರಿಕೆಯ ಸಂಪಾದಕ ಈರಾಜ್ ಬಹುಜನ್, ಮುಖಂಡರಾದ ಪಿ. ಮಹದೇವ್, ತಮ್ಮಣ್ಣಯ್ಯ, ಆನಂದ್, ಪುಟ್ಟಮಾದಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.