ನಂಜನಗೂಡು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಕಂಡುಕೊಳ್ಳಲು ಸಹಾಯಧನ ಹಾಗೂ ಬ್ಯಾಂಕುಗಳಿಂದ ಸಾಲ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವರ್ಷದೊಳಗಿನ ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಫಲಾನುಭವಿಗಳ ಆಯ್ಕೆಯು ಆ. 2 ರಂದು ನಂಜನಗೂಡು ಕ್ಷೇತ್ರದವರಿಗೆ, ಆ. 4 ರಂದು ವರುಣ ಕ್ಷೇತ್ರದ ಅಭ್ಯರ್ಥಿಗಳಿಗೆ ಬೆಳಗ್ಗೆ 11ಕ್ಕೆ ಪಟ್ಟಣದ ಹುಲ್ಲಹಳ್ಳಿ ರಸ್ತೆಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ನಡೆಯಲಿದೆ.