ಕಸಾಯಿಖಾನೆ ನಿರ್ಮಾಣ ವಿರೋಧಿಸಿ ಧರಣಿ ಇಂದು
ಮೈಸೂರು: ನಗರ ಮಿತಿಯೊಳಗೆ ಯಾಂತ್ರಿಕ ಕಸಾಯಿಖಾನೆ ನಿರ್ಮಾಣ ವಿರೋಧಿಸಿ ಆಧುನಿಕ- ಯಾಂತ್ರಿಕ ಕಸಾಯಿಖಾನೆ ವಿರೋಧಿ ಸಂಘಟನೆಗಳ ಒಕ್ಕೂಟವು ಜು.31 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ಅಂದು ಬೆಳಗ್ಗೆ 10.30ಕ್ಕೆ ಸುಬ್ಬರಾಯನಕೆರೆ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಉದ್ಯಾನದಿಂದ ಮೆರವಣಿಗೆ ಆರಂಭಿಸಿ ನಗರಪಾಲಿಕೆ ಕಚೇರಿಗೆ ತೆರಳಿ ಮೇಯರ್ ಹಾಗೂ ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ನೀಡಲಾಗುವುದು ಎಂದು ಒಕ್ಕೂಟದ ಸಂಚಾಲಕ, ಮಾಜಿ ಶಾಸಕ ಇ.ಮಾರುತಿರಾವ್ ಪವಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆರ್.ಎಸ್. ನಾಯ್ಡು ನಗರ, ಕೆಸರೆಯಲ್ಲಿ 40 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಸಾಯಿಖಾನೆ ಸಾಧುವಲ್ಲ. ಅಲ್ಲಿ ಜನರು ವಾಸ ಮಾಡುತ್ತಿದ್ದಾರೆ. ಪ್ರತಿದಿನ 1700 ಪ್ರಾಣಿಗಳನ್ನು ಕೊಲ್ಲಲಾಗುತ್ತದೆ. ಇದರಿಂದ ಉತ್ಪನ್ನವಾಗುವ ಅಗಾಧ ಪ್ರಮಾಣದ ಘನತ್ಯಾಜ್ಯ, ದ್ರವ ತ್ಯಾಜ್ಯಗಳಿಂದಾಗಿ ಸುಮಾರು 5 ಕಿ.ಮೀ. ವ್ಯಾಪ್ತಿಯವರೆಗೂ ಸಹಿಸಲಾಗದ ದುರ್ವಾಸನೆ ಬೀರುತ್ತದೆ. ಹೀಗಾಗಿ ಈ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಸದಸ್ಯರು ಭಾಗವಹಿಸುವರು: ಕಸಾಯಿಖಾನೆ ವಿರೋಧಿ ಹೋರಾಟವನ್ನು ಪಕ್ಷಾತೀತವಾಗಿ ನಡೆಸಲಾಗುತ್ತಿದೆ. ನಮ್ಮ ಬಿಜೆಪಿ ಸದಸ್ಯರೊಂದಿಗೂ ಚರ್ಚಿಸಲಾಗಿದೆ. ನಾಳಿನ ಹೋರಾಟದಲ್ಲಿ ಎಲ್ಲಾ ಪಕ್ಷದವರು ಭಾಗವಹಿಸಲಿದ್ದಾರೆ ಎಂಬ ನಂಬಿಕೆ ನನ್ನಲ್ಲಿದೆ ಎಂದು ತಿಳಿಸಿದರು. ಪದಾಧಿಕಾರಿಗಳಾದ ಎಸ್. ಮಹದೇವಪ್ರಸಾದ್, ಡಿ. ಮಹೇಶ್ ಪ್ರಸಾದ್, ಬಿ.ಎಸ್. ಕೃಷ್ಣಮೂರ್ತಿ, ಕೃಷ್ಣಮೂರ್ತಿ ರಾವತ್, ಗಿರೀಶ್ ಇದ್ದರು.
ಸಿಂಹಗರ್ಜನೆ ಯುವಸೇನೆ: ಆಧುನಿಕ ಯಾಂತ್ರಿಕ ಕಸಾಯಿಖಾನೆ ನಿರ್ಮಾಣ ವಿರೋಧಿಸಿ ಜು. 31ರ ಬೆಳಗ್ಗೆ 10.30ಕ್ಕೆ ಸುಬ್ಬರಾಯನಕೆರೆಯಿಂದ ಹೊರಡುವ ಮೆರವಣಿಗೆಯಲ್ಲಿ ಸಿಂಹಗರ್ಜನೆ ಯುವಸೇನೆ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಎ. ಪ್ರಕಾಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

