ಮೈಸೂರು

ಪ್ರೀತಿಗೆ ನಿರಾಕರಣೆ: ಪ್ರೇಮಿಗಳ ಆತ್ಮಹತ್ಯೆ ಯತ್ನ

Published On :

ಶ್ರೀರಂಗಪಟ್ಟಣ: ಪೋಷಕರು ಪ್ರೀತಿಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವ ಪ್ರೇಮಿಗಳಿಬ್ಬರು ಮನನೊಂದು  ಡೆತ್ ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಟ್ಟಣದ ಯಂಗ್ ಐ ಲ್ಯಾಂಡ್ ಹೊಟೇಲ್‌ನಲ್ಲಿ ನಡೆದಿದೆ.
ಮೈಸೂರಿನ ಜೆಎಸ್‌ಎಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾದ ನವೀನ್ ಕುಮಾರ್ (24) ಹಾಗೂ ನಾಗಶ್ರೀ(26) ಆತ್ಮಹತ್ಯೆಗೆ ಯತ್ನಿಸಿದವರು. ಮೈಸೂರಿನ ಕೆ.ಸಿ ಲೇ ಔಟ್ ನಿವಾಸಿ ಶಿವಲಿಂಗಪ್ಪ ಎಂಬವರ ಪುತ್ರ ನವೀನ್ ಕುಮಾರ್ ಅದೇ ಕಾಲೇಜಿನಲ್ಲಿ ಓದುತ್ತಿದ್ದ ತನಗಿಂತ ಎರಡು ವರ್ಷ ದೊಡ್ಡವಳಾದ ನಂಜನಗೂಡಿನ ಉಪ ತಹಸೀಲ್ದಾರ್ ನಾಗರಾಜುವಿನ ಪುತ್ರಿ ನಾಗಶ್ರೀಯನ್ನು ಪ್ರೀತಿಸುತ್ತಿದ್ದನು.
ವಯಸ್ಸಿನಲ್ಲಿ ತನಗಿಂತ ದೊಡ್ಡವಳಾದ ನಾಗಶ್ರೀ ಯನ್ನು ಮದುವೆಯಾಗಲೂ ಯುವಕ ತಾಯಿ ನಿರಾಕರಿಸಿದ ಹಿನ್ನಲೆಯಲ್ಲಿ ಮನನೊಂದ ಪ್ರೇಮಿಗಳಿಬ್ಬರು ತಮ್ಮ ಕಾರಿನಲ್ಲಿ ಭಾನುವಾರ ಸಂಜೆ ಪಟ್ಟಣದ ಹೊರ ವಲಯದಲ್ಲಿರುವ ಯಂಗ್ ಐ ಲ್ಯಾಂಡ್ ಹೊಟೇಲ್‌ಗೆ ಆಗಮಿಸಿ ಕೊಠಡಿ ಪಡೆದಿದ್ದಾರೆ. ರಾತ್ರಿ ಊಟ ಮುಗಿಸಿ ಡೆತ್ ನೋಟ್ ಬರೆದಿಟ್ಟು ರಾತ್ರಿ ಸುಮಾರು 11 ಗಂಟೆಯಲ್ಲಿ ಆಲ್ಫ್ರೋಜಾನ್ ಎಂಬ 35  ಮಾತ್ರೆಗಳನ್ನು ಹಾಗೂ 2 ಇನ್ಸುಲಿನ್ ಇಂಜೆಕ್ಷನ್‌ಗಳನ್ನು ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಯುವಕ ನವೀನ್ ಕುಮಾರ್ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾನೆ.
ಸೋಮವಾರ ಬೆಳಿಗ್ಗೆ 12 ಗಂಟೆಯಾದರೂ ರೂಂ ಬಾಗಿಲು ತೆಗೆಯದಿದ್ದನ್ನು ನೋಡಿ ಅನುಮಾನಗೊಂಡ ಹೊಟೇಲ್ ಸಿಬ್ಬಂದಿ ರೂಂ ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಹಾಗೂ ಯುವಕ ತೀವ್ರ ಅಸ್ವಸ್ಥ ಗೊಂಡು ನೆಲದ ಮೇಲೆ ಒದ್ದಾಡುತ್ತಿದ್ದನ್ನು ಕಂಡು ಪಟ್ಟಣದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪಟ್ಟಣದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿದ್ರೆ ಮಾತ್ರೆ ಸೇವಿಸಿರುವ ಯುವತಿಯ ಸ್ಥಿತಿ ಗಂಭೀರವಾಗಿದೆ. ಯುವಕ ತೀವ್ರ ಅಸ್ವಸ್ಥಗೊಂಡಿದ್ದಾನೆ. ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.