ಮೈಸೂರು

ತರಬೇತಿಗೆ ಅರ್ಜಿ ಆಹ್ವಾನ

Published On :

ಮೈಸೂರು: ಬೆಂಗಳೂರಿನ ಸೂಕ್ಷ್ಮ, ಲಘು ಮತ್ತು ಮಧ್ಯಮ ಉದ್ಯಮ ಮಂತ್ರಾಲಯದ ವತಿಯಿಂದ ಜೂ.23 ರಿಂದ 27ರವರೆಗೆ 5 ದಿನಗಳ ಕಾಲಾವಧಿಯ ಅಡಿಕೆ ಎಲೆ, ಕಾಗದದ ಲೋಟ ಮತ್ತು ತಟ್ಟೆ ತಯಾರಿಕೆ ಬಗ್ಗೆ ವಿದ್ಯಾವಂತ ನಿರುದ್ಯೋಗಿಗಳಿಗೆ ತರಬೇತಿ ನೀಡಲಾಗುವುದು. ಆಸಕ್ತರು ತಮ್ಮ ಸ್ವವಿವರವನ್ನೊಳಗೊಂಡ ಅರ್ಜಿಯನ್ನು ಸೂಕ್ಷ್ಮ, ಲಘು ಮತ್ತು ಮಧ್ಯಮ ಉದ್ಯಮ ಮಂತ್ರಾಲಯ, ಕೇಂದ್ರ ಸರ್ಕಾರ ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್ ಬೆಂಗಳೂರು ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕ ಕೆ. ಕಂದಸ್ವಾಮಿ, ದೂ.080-23151581-3, ಮೊ. 8971828533 ಸಂಪರ್ಕಿಸಬಹುದು.

ಇಬ್ಬರು ನಾಪತ್ತೆ
ಮೈಸೂರು: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಹೂಟಗಳ್ಳಿ ಎಸ್‌ಆರ್‌ಎಸ್ ಕಾಲೋನಿಯಲ್ಲಿರುವ ಒಡನಾಡಿ ಸೇವಾ ಸಂಸ್ಥೆಯಲ್ಲಿದ್ದ ಮಾನಸಿಕ ಅಸ್ವಸ್ಥೆಯಾದ ಸುಭಾಷಿಣಿ (26) ಮೇ 27 ರಿಂದ ನಾಪತ್ತೆಯಾಗಿದ್ದಾರೆ. ಅವರನ್ನು ಪತ್ತೆ ಮಾಡಿಕೊಡುವಂತೆ ಸಂಸ್ಥೆಯ ಶ್ರುತಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಹರೆ- 5.4 ಅಡಿ ಎತ್ತರ, ದುಂಡು ಮುಖ, ದೃಢಕಾಯ ಶರೀರ, ಎಣ್ಣೆಗೆಂಪು ಮೈಬಣ್ಣ, ಕನ್ನಡ ಮಾತನಾಡುತ್ತಾರೆ. ಹಿನಕಲ್ ಹೊಸಬೀದಿ ನಿವಾಸಿ ಆರ್. ರವಿಕುಮಾರ್ ಎಂಬವರ ಪುತ್ರ ಆರ್. ಮನೋಜ್ (19) ನಾಪತ್ತೆಯಾಗಿದ್ದಾರೆ. ಚಹರೆ- 5.2 ಅಡಿ ಎತ್ತರ, ಅಗಲವಾದ ಮುಖ, ಎಣ್ಣೆಗೆಂಪು ಮೈಬಣ್ಣ, ಕನ್ನಡ ಮಾತನಾಡುತ್ತಾರೆ. ಈ ಇಬ್ಬರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ.0821- 2418117, 317, 517 ಸಂಪರ್ಕಿಸಿ.

ಅಪರಿಚಿತ ಸಾವು
ಮೈಸೂರು: ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಣಿ ಕಾಲೇಜು ಕಾಂಪೌಂಡ್ ಬಳಿ ಅಸ್ವಸ್ಥರಾಗಿ ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಚಹರೆ- 40 ವರ್ಷ, 5.5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಕಪ್ಪು ತಲೆಗೂದಲು, ಗಡ್ಡ ಮೀಸೆ ಬಿಟ್ಟಿದ್ದಾರೆ. ನೀಲಿ ಬಣ್ಣದ ಗೀರುಳ್ಳ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ದೂ.0821- 2418320, 520 ಸಂಪರ್ಕಿಸಲು ಲಕ್ಷ್ಮಿಪುರಂ ಟಾಣೆ ಪೊಲೀಸರು ಕೋರಿದ್ದಾರೆ.

ರಮ್ಯಾಗೆ ಡಾಕ್ಟರೇಟ್
ಮೈಸೂರು: ಡಾ.ಜಿ.ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ವಿ.ಪಿ. ರಮ್ಯಾ ಅವರು ಸಾದರಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿವಿ ಅಂಗೀಕರಿಸಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಪಿಎಚ್.ಡಿ ಪದವಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.