ಮೈಸೂರು

ಗಿಡನೆಟ್ಟು ತಾಪಮಾನ ತಗ್ಗಿಸಿ: ಎಸಿ ಜಗದೀಶ್

Published On :

ಹುಣಸೂರು: ವಿದ್ಯಾರ್ಥಿಳು ಕನಿಷ್ಠ ಒಂದು ಗಿಡ ನೆಟ್ಟಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಜೊತೆಗೆ ಜಾಗತಿಕ ತಾಪಮಾನ ತಗ್ಗಿಸಲು ಸಹಕಾರಿ ಆಗಲಿದೆ ಎಂದು ಎಸಿ ಜಗದೀಶ್ ತಿಳಿಸಿದರು. ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಅರಣ್ಯ ಇಲಾಖೆ, ಸ್ಫೂರ್ತಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ವಿಭಾಗ ಮಟ್ಟದ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಹುಣಸೂರು ವಿಭಾಗದಲ್ಲಿ ಹೆಚ್ಚು ತಂಬಾಕು ಬೆಳೆ ಬೆಳೆಯುತ್ತಿದ್ದು, ಉರುವಲು ಸಮಸ್ಯೆಯಿಂದ ಮರಗಳ ಹನನವಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಕನಿಷ್ಠ ಒಂದು ಗಿಡ ನೆಟ್ಟು ಭವಿಷ್ಯದಲ್ಲಿ ಉತ್ತಮ ಪರಿಸರ ನಿರ್ಮಿಸಬೇಕು. ಅಲ್ಲದೆ ಶಾಲಾ ಆವರಣ, ಬೇಸಾಯಕ್ಕೆ ಯೋಗ್ಯವಲ್ಲದ ಭೂಮಿ, ಜಮೀನಿನ ಬದುಗಳಲ್ಲಿ ಅರಣ್ಯ ಸಸಿ ನೆಟ್ಟಲ್ಲಿ ಒಂದೆಡೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಜೊತೆಗೆ ಉರುವಲು ಸಮಸ್ಯೆ ಸಹ ನೀಗಿಸಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.