ರಾಸಾಯನಿಕ ಕಡಿಮೆಗೊಳಿಸಿ
ಹುಣಸೂರು: ಜಾಗತಿಕ ತಾಪಮಾನ ಸಮತೋಲನೆ ಕಾಪಾಡುವ ದೃಷ್ಟಿಯಿಂದ ರಾಸಾಯನಿಕ ಬಳಕೆಗೆ ಬದಲು ರೈತರು ಸಾವಯವ ಗೊಬ್ಬರ ಬಳಸುವ ಮೂಲಕ ಭೂಮಿಯ ಫಲವತ್ತತೆ ಹೆಚ್ಚಿಸಬೇಕು ಎಂದು ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಿವಣ್ಣಗೌಡ ರೈತರಿಗೆ ಸೂಚಿಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುರುವಾರ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಇಲಾಖೆ ಆವರಣದಲ್ಲಿ ನಡೆದ ಸಮಾರಂಭದಲ್ಲಿ ರೈತರು ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಸಸಿ ವಿತರಿಸಿ ಮಾತನಾಡಿ, ಹೆಚ್ಚು ರಸಗೊಬ್ಬರ ಬಳಕೆಯಿಂದ ಪರಿಸರ ನಾಶವಾಗಿ, ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಇದರಿಂದ ಬೆಳೆಯುವ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಮಾರಕ ರೋಗಗಳು ಬರುತ್ತಿವೆ. ರೈತರು ಜೈವಿಕ ಗೊಬ್ಬರ ಬಳಸಿ ವ್ಯವಸಾಯ ಮಾಡಬೇಕು ಇದರಿಂದ ರೋಗ ಕಡಿಮೆ ಆಗಲಿದೆ ಎಂದರು. ಡಿಸಿಎಫ್ ಬಾಲಚಂದರ್ ಮಾತನಾಡಿದರು. ಎಸಿಎಫ್ ಪ್ರಸನ್ನಕುಮಾರ್, ಆರ್ಎಫ್ಒ ಶಿವರಾಮ್, ವನಪಾಲಕ ನಂದಕುಮಾರ್, ರಾಧ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

