ಮೈಸೂರು

ವನ್ಯ ಸಂಪತ್ತು, ಪರಿಸರ ಸಂರಕ್ಷಣೆ ಅಗತ್ಯ

Published On :

ಟಿ. ನರಸೀಪುರ: ವನ್ಯ ಸಂಪತ್ತನ್ನು ಸಂರಕ್ಷಣೆ ಮಾಡುವ ಮೂಲಕ ಅಳಿವಿನ ಅಂಚಿನಲ್ಲಿರುವ ಪರಿಸರ ಉಳಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ನಟರಾಜು ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಗುರುವಾರ ರೈತ ಸಂಘ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿನೆಟ್ಟು ನೀರೆರೆದು ಮಾತನಾಡಿದ ಅವರು, ನಾಗರಿಕತೆಯೊಂದಿಗೆ ಜನಸಂಖ್ಯೆ ಬೆಳೆಯುತ್ತಿರುವುದರಿಂದ ಮೂಲಭೂತ ಸೌಲಭ್ಯಕ್ಕಾಗಿ ಮರಗಿಡ ಕಡಿದು, ಅಡವಿಗಳನ್ನು ಅತಿಕ್ರಮಿಸಿಕೊಳ್ಳುವ ಪ್ರವೃತ್ತಿಯಿಂದ ಕಾಡು ನಾಶವಾಗುತ್ತಿದೆ ಎಂದರು.
ಒಬ್ಬೊಬ್ಬರು ಒಂದೊಂದು ಗಿಡ ನೆಟ್ಟು, ಬೆಳೆಸುವ ಗುಣ ಮೈಗೂಡಿಸಿಕೊಳ್ಳಬೇಕು.
ಪರಿಸರ ದಿನಾಚರಣೆ ನಿತ್ಯವೂ ನಡೆಯುವಂತಾಗಬೇಕು. ಆಧುನಿಕತೆ ಹಾಗೂ ಜಾಗತೀಕರಣದಿಂದ ವಾತಾವರಣದ ತಾಪಮಾನ ಮತ್ತಷ್ಟು ಹೆಚ್ಚಾಗುವ ಮುನ್ನ ಪ್ರತಿಯೊಬ್ಬರು ಎತ್ತೆಚ್ಚುಕೊಳ್ಳಬೇಕು ಎಂದರು.
ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಜೆ. ಶಿವಪ್ರಸಾದ್ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೈತ ಸಂಘದಿಂದ ಗಿಡನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರೈತ ನಾಯಕ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಪುತ್ಥಳಿ ನಿರ್ಮಿಸಿ, ವೃತ್ತವೊಂದಕ್ಕೆ ಅವರ ಹೆಸರು ನಾಮಕಾರಣ ಮಾಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.
ರೈತ ಸಂಘದ ತಾಲೂಕು ಅಧ್ಯಕ್ಷ ಮಹದೇವ, ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಶಿವಣ್ಣ, ನಂಜನಗೂಡು ಅಧ್ಯಕ್ಷ ಗುರುಲಿಂಗೇಗೌಡ, ಮುಖಂಡರಾದ ಬಕ್ಕಳ್ಳಿ ನಂಜುಂಡಸ್ವಾಮಿ, ವಿದ್ಯಾಸಾಗರ್, ಶಿವನಂಜು, ಎಂ.ಸಿದ್ದರಾಜು, ಮೂರ್ತಿ, ಮಹದೇವಸ್ವಾಮಿ, ಮಹೇಶ, ಶಿವನಂಜು, ಹೈದರ್ ಸಾಬ್, ಎಂ. ಸಿದ್ದರಾಜು, ಸಿದ್ದಲಿಂಗರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.