ಜೂನ್ ತಿಂಗಳ ಪಡಿತರ ಬಿಡುಗಡೆ ಮಾಡಿದ ಸರ್ಕಾರ
ಮೈಸೂರು: ಜಿಲ್ಲೆಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ಜೂ.2014ರ ಮಾಹೆಗೆ ಅಂತ್ಯೋದಯ ಕಾರ್ಡುದಾರರಿಗೆ 29 ಕೆ.ಜಿ ಅಕ್ಕಿ, 6 ಕೆ.ಜಿ. ಗೋಧಿ ಬಿಪಿಎಲ್ ಏಕಸದಸ್ಯ ಪಡಿತರ ಕಾರ್ಡುದಾರರಿಗೆ 9 ಕೆ.ಜಿ. ಅಕ್ಕಿ, ದ್ವಿ ಸದಸ್ಯ 19 ಕೆ.ಜಿ. ಅಕ್ಕಿ, ತ್ರಿ ಸದಸ್ಯ ಮತ್ತು ಅದಕ್ಕಿಂತ ಹೆಚ್ಚಿನ ಸದಸ್ಯರಿಗೆ 28 ಕೆ.ಜಿ. ಅಕ್ಕಿ, ಏಕಸದಸ್ಯ ಕಾರ್ಡುದಾರರಿಗೆ ರಾಗಿ 1 ಕೆ.ಜಿ., ದ್ವಿಸದಸ್ಯ ಕಾರ್ಡುದಾರರಿಗೆ ರಾಗಿ 1 ಕೆ.ಜಿ., ತ್ರಿ ಸದಸ್ಯ ಮತ್ತು ಅದಕ್ಕಿಂತ ಹೆಚ್ಚಿನ ಸದಸ್ಯರಿಗೆ 2 ಕೆ.ಜಿ. ರಾಗಿ. ಜೂನ್ 2014ರಲ್ಲಿ ಎಪಿಎಲ್ ಪಡಿತರ ಚೀಟಿದಾರರಿಗೆ ಹಂಚಿಕೆ ಮಾಡಲ್ಲ. ಇದಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಗ್ರಾಪಂ, ತಾಲೂಕು ಮಟ್ಟದ ಅಧಿಕಾರಿಗಳು ಅಥವಾ ತಹಸೀಲ್ದಾರ್ ಅವರನ್ನು ಸಂಪರ್ಕಿಸಬಹುದು ಅಥವಾ ಡಾ.ಕೆ.ರಾಮೇಶ್ವರಪ್ಪ, ಹಿರಿಯ ಉಪನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮೈಸೂರು ದೂ.2422107 ಅಥವಾ ಬೆಂಗಳೂರಿನ ಶುಲ್ಕ ರಹಿತ ಸಹಾಯವಾಣಿ 1800-425-9339ಗೆ ದೂರು ಸಲ್ಲಿಸಬಹುದೆಂದು ತಿಳಿಸಿದ್ದಾರೆ.
ಸಂಗೀತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಮೈಸೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ 2013-14 ಹಾಗೂ 2014-15ನೇ ಸಾಲಿನ ಶಿಷ್ಯ ವೇತನ ನೀಡಲು 16 ರಿಂದ 24 ವರ್ಷ ವಯೋವುತಿಯೊಳಗಿರುವ ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದವರಿಗೆ 5 ಸಾವಿರ ಶಿಷ್ಯವೇತನ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇಲ್ಲಿ ಉಚಿತವಾಗಿ ಪಡೆಯಬಹುದು. ಅಂಚೆ ಮೂಲಕವು ಪಡೆಯಬಹುದು. ಅರ್ಜಿಗಳನ್ನು ಜೂ.30 ರೊಳಗೆ ಸಲ್ಲಿಸುವುದು. ಮಾಹಿತಿಗಾಗಿ ದೂ.080-22215072 ಮೂಲಕ ಸಂಪರ್ಕಿಸಲು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಟಿ.ಜಿ. ನರಸಿಂಹಮೂರ್ತಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

