ಸಂಗೀತ ವಿಶ್ವವಿದ್ಯಾಲಯದಿಂದ ಕೋರ್ಸ್‌ಗೆ ಅರ್ಜಿ ಆಹ್ವಾನ
ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿಯಲ್ಲಿ 2014-15ನೇ ಸಾಲಿಗೆ ಸಂಬಂಧಿಸಿದಂತೆ ಎಂ.ಎ, ಬಿ.ಎ, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ತರಗತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸಂಗೀತದಲ್ಲಿ ಗಾಯನ, ವೀಣೆ, ಪಿಟೀಲು, ಮೃದಂಗ, ಹಿಂದೂಸ್ತಾನಿ ಸಂಗೀತದಲ್ಲಿ ಗಾಯನ, ತಬಲ, ಸಿತಾರ್, ನೃತ್ಯದಲ್ಲಿ ಭರತನಾಟ್ಯ, ಕಥಕ್, ನಾಟಕ, ಸರ್ಟಿಫಿಕೇಟ್ ಕೋರ್ಸ್‌ನಲ್ಲಿ ಲಘು ಸಂಗೀತ, ಭಕ್ತಿ ಸಂಗೀತದ ಕೋರ್ಸುಗಳು ಲಭ್ಯ ಇವೆ. ಎಂ.ಎ. ಕೋರ್ಸಿನ ಅರ್ಜಿಗಳಿಗೆ ಸಾಮಾನ್ಯ ಅಭ್ಯರ್ಥಿಗಳು 400, ಎಸ್ಸಿ, ಎಸ್ಟಿ ಅಭ್ಯರ್ಥಿಗಳು 200 ಹಾಗೂ ಸಾಮಾನ್ಯ ಅಭ್ಯರ್ಥಿಗಳು ಬಿ.ಎ., ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸಿಗೆ 200, ಎಸ್ಸಿ, ಎಸ್ಟಿ ಅಭ್ಯರ್ಥಿಗಳು 100 ಪಾವತಿಸಬಹುದು ಎಂದು ಕುಲಸಚಿವ ಡಾ.ವೈ.ಎನ್. ಸಿದ್ದೇಗೌಡ ತಿಳಿಸಿದ್ದಾರೆ. ಆಸಕ್ತರು ಹಣಕಾಸು ಅಧಿಕಾರಿ, ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ, ಮೈಸೂರು. ಇವರ ಹೆಸರಿನಲ್ಲಿ ಡಿಡಿ ಪಡೆದು ಬಿಎ, ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸುಗಳಿಗೆ ಜೂ.20, ಎಂ.ಎ. ತರಗತಿಗಳಿಗೆ ಜು.10 ರೂಳಗೆ ಅರ್ಜಿ ಸಲ್ಲಿಸಿ. ದೂ.0821- 2419443, 2402141.
ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟುವಂತೆ ಮನವಿ
ಮೈಸೂರು: ಉತ್ತರಪ್ರದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಕರ್ನಾಟಕ ದಲಿತ ವೇದಿಕೆ ಆಗ್ರಹಿಸಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಆಡಳಿತ ನಡೆಸುತ್ತಿದ್ದು, ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಆರೋಪಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಇದರ ಪರಿಣಾಮದಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಉತ್ತರ ಪ್ರದೇಶದಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳಾಗಲಿ ಅಥವಾ ಪ್ರಧಾನಮಂತ್ರಿಗಳಾಗಲಿ ತಡೆಗಟ್ಟಲು ಕ್ರಮ ಕೈಗೊಂಡಿಲ್ಲ. ಇದು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ವೇದಿಕೆ ಪದಾಧಿಕಾರಿಗಳಾದ ಡಿ.ಎಸ್.ನಟರಾಜ್, ಕೆ. ಶಂಕರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

