ಮೈಸೂರು

ಹಿಂದುಳಿದ ವರ್ಗದವರಿಗೆ ಸ್ವ ಉದ್ಯೋಗ ಕೈಗೊಳ್ಳಲು ಸಹಾಯ

Published On :

ಮೈಸೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2014-15ರ ಸಾಲಿಗೆ ಹಿಂದುಳಿದ ವರ್ಗಗಳ ಜನರ ಅರ್ಥಿಕ ಅಭಿವೃದ್ಧಿಗೆ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ. ಜೂ.20 ರೊಳಗೆ ಅರ್ಜಿ ಪಡೆದು ಜು.19 ರೊಳಗೆ ಸಲ್ಲಿಸಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರು ಅರ್ಜಿ ಸಲ್ಲಿಸಬಹುದು. ಚಾಮರಾಜ, ಕೃಷ್ಣರಾಜ ಮತ್ತು ನರಸಿಂಹರಾಜ ಕ್ಷೇತ್ರದವರು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ನಂ. 2314, ಪಂಚಮಂತ್ರ ರಸ್ತೆ, ಜೆ ಬ್ಲಾಕ್, ಕುವೆಂಪುನಗರ, ಮೈಸೂರು-570023 ಮತ್ತು ಪಿರಿಯಾಪಟ್ಟಣ, ಹುಣಸೂರು, ಕೆ.ಆರ್. ನಗರ, ನಂಜನಗೂಡು, ಎಚ್.ಡಿ. ಕೋಟೆ, ಟಿ.ನರಸೀಪುರ, ಚಾಮುಂಡೇಶ್ವರಿ ಮತ್ತು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಉಚಿತ ಅರ್ಜಿ ಪಡೆಯಬಹುದು. 2341194 ಸಂಪರ್ಕಿಸಬಹುದು.

ಕೈಗಾರಿಕಾ ಸೇವಾ ಚಟುವಟಿಕೆಗಳ ಆರಂಭಿಸಲು ಅರ್ಜಿ ಆಹ್ವಾನ

ಮೈಸೂರು: 2014-15ನೇ ಸಾಲಿಗೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಕೈಗಾರಿಕೆ ಹಾಗೂ ಕೈಗಾರಿಕೆಗಳಿಗೆ ಸಂಬಂಧಿಸಿದ ಸೇವಾ ಚಟುವಟಿಕೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಂ.ಶಿವಶಂಕರ್ ಹೇಳಿದ್ದಾರೆ.  ಗರಿಷ್ಠ ಉದ್ಯೋಗ ಸೃಷ್ಟಿಸುವ ಕೈಗಾರಿಕಾ, ಸೇವಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುವುದು. ಕೈಗಾರಿಕೆಗಳಿಗೆ ಗರಿಷ್ಠ 25 ಲಕ್ಷ ಹಾಗೂ ಸೇವಾ ಚಟುವಟಿಕೆಗಳಿಗೆ 10 ಲಕ್ಷ್ಟವರೆಗೆ ಸಾಲ ಪಡೆಯಲು ಅವಕಾಶವಿದೆ. ಗ್ರಾಮೀಣ ಅಭ್ಯರ್ಥಿಗಳಿಗೆ ಶೇ.25, ನಗರದವರಿಗೆ ಶೇ.15 ಸಹಾಯಧನ ದೊರೆಯಲಿದೆ. ವಿಶೇಷ ವರ್ಗದವರಿಗೆ ಶೇ.10 ರಷ್ಟು ಹೆಚ್ಚುವರಿ ಸಹಾಯಧನ ನೀಡಲಾಗುವುದು. ಆಸಕ್ತರು ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕುವೆಂಪುನಗರ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ವಿಜಿನಾಪುರ, ದೂರವಾಣಿ ನಗರ, ಬೆಂಗಳೂರು ಹಾಗೂ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ. ಜೂ.30ರ ಅರ್ಜಿ ಸಲ್ಲಿಸಲು ಕಡೆ ದಿನ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.