ಮೈಸೂರು

ರು.2 ಕ್ಕೆ 20 ಲೀಟರ್ ಕುಡಿವ ನೀರು

Published On :

ಭೇರ್ಯ: ಪ್ಲೋರೈಡ್ ಮಿಶ್ರಿತ ನೀರು ಕುಡಿಯುವುದರಿಂದ ಹೃದ್ರೋಗ, ಕಿಡ್ನಿ ಮುಂತಾದ ಮಾರಾಣಾಂತಿಕ ರೋಗಕ್ಕೆ ತುತ್ತಾಗುವುದರಿಂದ ನದಿಯಿಂದ ಶುದ್ಧೀಕರಿಸಿದ ನೀರು ಪೂರೈಸುತ್ತಿರುವುದಾಗಿ ಶಾಸಕ ಸಾ.ರಾ. ಮಹೇಶ್ ಹೇಳಿದರು. ಹೊಸ ಅಗ್ರಹಾರ ಗ್ರಾಪಂ ವಾಣಿಜ್ಯ ಸಂಕೀರ್ಣ ಮಳಿಗೆಯಲ್ಲಿ ಶಾಸಕರ ನಿಧಿಯಿಂದ 5 ಲಕ್ಷ ವೆಚ್ಚದಲ್ಲಿ 2ಕ್ಕೆ 20 ಲೀಟರ್ ಶುದ್ಧೀಕರಿಸಿದ ಕುಡಿಯುವ ನೀರು ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
28 ಕೋಟಿ ವೆಚ್ಚದ ಶಾಶ್ವತ ಕುಡಿಯುವ ನೀರು ಯೋಜನೆಗೆ 169 ಗ್ರಾಮಗಳು ಒಳಪಟ್ಟಿದೆ. ಈಗಾಗಲೆ 125 ಗ್ರಾಮಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ತಾಲೂಕಿನ 25 ಪ್ರಮುಖ ಗ್ರಾಮಗಳಲ್ಲಿ 2 ದರದಲ್ಲಿ 20 ಲೀಟರ್ ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕ ತೆರಯುವ ಉದ್ದೇಶ ಇದೆ. ಆದರೆ ಕೆಲವರು ಕುಡಿಯುವ ನೀರಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ತಾಲೂಕಿನ ಎಲ್ಲಾ ಗ್ರಾಮಗಳಿಗೂ ನದಿಯಿಂದ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗಿದೆ. ಶಿಕ್ಷಣಕ್ಕಾಗಿ ವಿವಿಧ ದರ್ಜೆಯ ಕಾಲೇಜ್ಗಳನ್ನು ತೆರೆಯಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬಸ್ಪಾಸ್ಗೆ ಹಣ ನೀಡಲಾಗುತ್ತಿದೆ ಎಂದು ಹೇಳಿದರು.
ತಹಸೀಲ್ದಾರ್ ಶಿವಶಂಕರಪ್ಪ, ಇಒ ಸಿದ್ದಲಿಂಗಮೂರ್ತಿ, ಉಪ ತಹಸೀಲ್ದಾರ್ ಯಧುಗಿರೀಶ್, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ, ಸದಸ್ಯರಾದ ಸಾಧೀಕ್ಖಾನ್, ನಾಗಣ್ಣ, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್, ಹೋಬಳಿ ಅಧ್ಯಕ್ಷ ರಾಜೇಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.