ವರ್ಷದಲ್ಲಿ ಸಿದ್ದು ಸರ್ಕಾರ ಪತನ: ಪುಟ್ಟಸ್ವಾಮಿ
ಟಿ. ನರಸೀಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವರ್ಷದಲ್ಲೆ ಪತನ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಹೇಳಿದರು.
ಪಟ್ಟಣದ ಸರ್ಕಾರಿ ಅತಿಥಿ ಗೃಹದಲ್ಲಿ ಸೋಮವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರಕ್ಕಾಗಿ ದಿನದಿಂದ ದಿನಕ್ಕೆ ಆಂತರಿಕ ಕಚ್ಚಾಟ ಹಾಗೂ ಭಿನ್ನಮತ ಹೆಚ್ಚಿದೆ. ಭಿನ್ನಮತ ಸ್ಪೂಟಗೊಂಡು ಸರ್ಕಾರವೆ ಬೀಳಲಿದೆ ಎಂದು ಭವಿಷ್ಯ ನುಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸದೃಢ ರಾಷ್ಟ್ರ ನಿರ್ಮಿಸುವರು. ನೆರೆಯ ಪಾಕಿಸ್ತಾನ ಹಾಗೂ ಚೀನಾ ರಾಷ್ಟ್ರಗಳು ಭಾರತದ ಸ್ನೇಹ ಬಯಸುತ್ತಿವೆ. ಕೇಂದ್ರದಲ್ಲಿ ಮೋದಿ ಅವರ ನಾಯಕತ್ವದಲ್ಲಿ ಸರ್ಕಾರ ರಚನೆಯಾಗುತ್ತಿದ್ದಂತೆ ಶ್ರೀಲಂಕಾದಲ್ಲಿ ಬಂಧಿತ ಭಾರತೀಯ ಮೀನುಗಾರರು ಬಿಡುಗಡೆಯಾದರು. ಅಲ್ಪಸಂಖ್ಯಾತರು ಯಾವುದೆ ಭಯ ಇಲ್ಲದೆ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಎಂದರು.
ಗಾಣಿಗ ಸಮುದಾಯದ ಬಗ್ಗೆ ಕಾಳಜಿ ಇಲ್ಲದ ವಿ.ಆರ್. ಸುದರ್ಶನ್ ಅಂತವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ನಿವೇಶನದ ಬಗ್ಗೆ ತಕಾರರು ತೆಗೆಯುತ್ತಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

