ಗಂಧನಹಳ್ಳಿ ರಸ್ತೆ ದುರಸ್ತಿಗೆ 2 ಕೋಟಿ
ಭೇರ್ಯ: ಕೆ.ಆರ್.ನಗರ ತಾಲೂಕಿನ ಗಂಧನಹಳ್ಳಿ ಗ್ರಾಮದ ಬಹುದಿನದಿಂದ ನೆನೆಗುದ್ದಿಗೆ ಬಿದ್ದಿದ್ದ ಬೈಪಾಸ್ ರಸ್ತೆ ದುರಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2 ಕೋಟಿ ಬಿಡುಗಡೆ ಮಾಡಿದ್ದಾರೆ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಜಿ.ಎನ್. ಮಲ್ಲೇಗೌಡ ತಿಳಿಸಿದ್ದಾರೆ. ಮಿರ್ಲೆ, ಸಾಲಿಗ್ರಾಮ, ಕೆ.ಆರ್.ನಗರಕ್ಕೆ ಹೋಗುವ ಬಸ್ಸುಗಳು ಗಂಧನಹಳ್ಳಿ ಗ್ರಾಮದ ಮಾರ್ಗವಾಗಿ ಹೋಗಲು ಬೈಪಾಸ್ ರಸ್ತೆಯನ್ನು 85 ಲಕ್ಷ ವೆಚ್ಚದಲ್ಲಿ ದುರಸ್ತಿ ಮಾಡಲು ಹಣ ಬಿಡುಗಡೆಯಾಗಿತ್ತು. ಆದರೆ, ಗುತ್ತಿಗೆ ಪಡೆದಿದ್ದವರು ಪರಾರಿಯಾಗಿದ್ದರಿಂದ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಇದನ್ನು ಅರಿತಿದ್ದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಕೂಡಲೇ ಗ್ರಾಮಸ್ಥರ ಒತ್ತಾಯಕ್ಕೆ ಮಣಿದು 2 ಕೋಟಿ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.
ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ
ಭೇರ್ಯ: ಸಮೀಪದ ಅರಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಭೇರ್ಯ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಉಚಿತ ನೋಟ್ ಪುಸ್ತಕವನ್ನು ತಾಲೂಕು ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ವಿತರಿಸಿದರು. ನಂತರ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಶಿಕ್ಷಣ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರತಿ ಮಕ್ಕಳಿಗೆ ಕನಿಷ್ಠ ಯಾವುದಾದರೂ ಪದವಿ ಪಡೆಯುವವರೆಗೆ ಶಿಕ್ಷಣ ಕೊಡಿಸಬೇಕೆಂದು ಪೋಷಕರಿಗೆ ಕಿವಿಮಾತು ಹೇಳಿದರು. ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರವೀಣ್, ಅಲ್ಪಸಂಖ್ಯಾತರ ಮುಖಂಡ ಮಕ್ಸೂದ್, ಮುಖಂಡರಾದ ಆರ್. ಮಂಜಪ್ಪ, ಸಿ.ಪಿ.ಕುಮಾರ್, ಮೂರ್ತಿ, ಅನಿಲ್, ಶಿಕ್ಷಕರಾದ ಎಂ. ಮಾಕು, ಅಪ್ಪಾಜಿಗೌಡ ಇದ್ದರು.
ಹೆಚ್ಚಿನ ಬಸ್ ಸೌಲಭ್ಯಕ್ಕೆ ಆಗ್ರಹ
ಸರಗೂರು: ಸರಗೂರು-ಮೈಸೂರು ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಒದಗಿಸುವಂತೆ ಸಾರಿಗೆ ಸಂಸ್ಥೆಯ ಗ್ರಾಮಾಂತರ ವಿಭಾಗದ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಹಾಗೂ ವಿಭಾಗೀಯ ಸಂಚಲನಾಧಿಕಾರಿ ಬಸವರಾಜು ಅವರಿಗೆ ವರ್ತಕರ ಮಂಡಳಿ ಅಧ್ಯಕ್ಷ ಲಕ್ಷ್ಮಣೇಗೌಡ ಮನವಿ ಸಲ್ಲಿಸಿದರು. ಪಟ್ಟಣವು ತಾಲೂಕಿನಲ್ಲಿ ಬಹು ವಿಸ್ತಾರವಾದ ಪ್ರದೇಶವಾಗಿದ್ದು, ಸರಗೂರು ವ್ಯಾಪ್ತಿಗೆ ಹೆಚ್ಚು ಗ್ರಾಮಗಳು ಒಳಪಡುತ್ತವೆ. ಗ್ರಾಮಾಂತರ ಪ್ರದೇಶದಿಂದ ಸರಗೂರು ಪಟ್ಟಣಕ್ಕೆ ಜನರು ಬರಲು ಸಾರಿಗೆ ಬಸ್ ವ್ಯವಸ್ಥೆ ಸರಿಯಾಗಿಲ್ಲ. ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ವರ್ತಕರ ಮಂಡಳಿ ವಾರ್ಷಿಕ ಸಭೆಯಲ್ಲಿ ಎಚ್.ಡಿ. ಕೋಟೆ ಘಟಕ ವ್ಯವಸ್ಥಾಪಕ ಬ್ರಹ್ಮದೇವ್ ತಿಳಿಸಿದ್ದರು. ಅದಿನ್ನೂ ಕಾರ್ಯಗತವಾಗಿಲ್ಲ. ಎಚ್.ಡಿ. ಕೋಟೆ - ಸರಗೂರು ಮಾರ್ಗವಾಗಿ ಚಾಮರಾಜನಗರ ಮತ್ತು ಗುಂಡ್ಲುಪೇಟೆಗೆ ಹಿಂದೆ ಬಸ್‌ನ ವ್ಯವಸ್ಥೆ ಕಲ್ಪಿಸಲಾಗಿತ್ತು. ಒಂದು ವರ್ಷದಿಂದ ಸಾರಿಗೆ ವ್ಯವಸ್ಥೆ ಇಲ್ಲವಾಗಿ ಮೈಸೂರು ಮಾರ್ಗವಾಗಿ ಚಾಮರಾಜನಗರಕ್ಕೆ ಹೋಗಬೇಕಾಗಿದೆ ಎಂದು ತಿಳಿಸಿದರು. ರಾತ್ರಿ ವೇಳೆ ಸರಗೂರಿನಿಂದ ಎಚ್.ಡಿ.ಕೋಟೆ ಮತ್ತು ಮೈಸೂರಿಗೆ ಸಾರಿಗೆ ವ್ಯವಸ್ಥೆ ಇಲ್ಲ. ಸಿಟಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಿದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ ಮೂರು ವರ್ಷವಾದರೂ ಇನ್ನು ಪೂರ್ಣಗೊಂಡಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

