ಮೈಸೂರು

ಮಹಿಳೆಯರ ಅಪಹರಣ ತಡೆಗೆ ಆಗ್ರಹ

Published On :

ಮೈಸೂರು: ಕಾಣೆಯಾದ ಮಹಿಳೆಯರನ್ನು ಪತ್ತೆ ಮಾಡಿ, ಮಹಿಳೆಯರ ಅಪಹರಣ ತಡೆಗಟ್ಟುವಂತೆ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಟಿ.ಎನ್. ಶಾಂತ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಯುವತಿಯರು ಮತ್ತು ಮಹಿಳೆಯರು ಕಾಣೆಯಾಗುತ್ತಿರುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಈ ಬಗ್ಗೆ ದೂರು ದಾಖಲಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದೆ ಇರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಎನ್‌ಸಿಆರ್‌ಬಿ ಪ್ರಕಾರ ರಾಜ್ಯದಲ್ಲಿ ಅತಿ ಹೆಚ್ಚು ಮಹಿಳೆಯರು ಕಾಣೆಯಾಗಿದ್ದರ ಬಗ್ಗೆ ವರದಿಯಾಗಿದೆ. ಇದರಿಂದ ಹೆಣ್ಣು ಮಕ್ಕಳ ಮಾರಾಟ ಜಾಲವಿರುವುದು ಖಚಿತವಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.



ಆಟೋ ಡಿಸ್‌ಪ್ಲೇ ಪಡೆಯಲು ಸೂಚನೆ
ಮೈಸೂರು: ಆಟೋ ಚಾಲಕರು ಮತ್ತು ಮಾಲೀಕರು ಆಟೋ ಡಿಸ್‌ಪ್ಲೇ ಕಾರ್ಡ್‌ಗಳನ್ನು ಜೂ.25 ರೊಳಗೆ ಪಡೆದುಕೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಸೂಚಿಸಿದ್ದಾರೆ. ನಗರದಲ್ಲಿ ಸಂಚರಿಸುವ ಆಟೋಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಆಟೋ ಚಾಲಕರ ವಿವರವುಳ್ಳ ಫಲಕವನ್ನು ಪ್ರಯಾಣಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಅಳವಡಿಸುವ ಬಗ್ಗೆ ಡಿಸ್‌ಪ್ಲೇ ಕಾರ್ಡ್‌ಗಳನ್ನು ಪೊಲೀಸ್ ಇಲಾಖೆ ವತಿಯಿಂದ ಏ.28 ರಿಂದ ವಿತರಿಸಲಾಗುತ್ತಿದೆ. ಈವರೆಗೆ 8 ಸಾವಿರ ಆಟೋ ಚಾಲಕರು ಮಾತ್ರ  ಡಿಸ್‌ಪ್ಲೇ ಕಾರ್ಡ್‌ಗಳನ್ನು ಪಡೆದಿದ್ದಾರೆ. ಎಲ್ಲ ಆಟೋ ಚಾಲಕರು ಡಿಸ್‌ಪ್ಲೇ ಕಾರ್ಡ್‌ಗಳನ್ನು ಜೂ.25 ರೊಳಗೆ ಪಡೆದು ಅವರು ಚಾಲನೆ ಮಾಡುವ ಆಸನದ ಹಿಂಭಾಗದಲ್ಲಿ ಪ್ರಯಾಣಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.