ಶುದ್ಧ ನೀರಿನ ಘಟಕ
ಕ.ಪ್ರ. ವಾರ್ತೆ ಟಿ ಕೆ.ಆರ್. ನಗರ ಟಿ ಜೂ.12
ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ನೀಡುವ ವಾರ್ಷಿಕ ಅನುದಾನದಲ್ಲಿ ಪ್ರತಿ ಜಿಪಂ ಕ್ಷೇತ್ರದ ಒಂದು ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲು ನಿರ್ಧರಿಸಿದ್ದು, ಈ ಬಗ್ಗೆ ಸದಸ್ಯರೊಡನೆ ಚರ್ಚಿಸಿ ಯೋಜನೆಯ ಅನುಷ್ಠಾನಗೊಳಿಸಲಾಗುವುದು ಎದು ಜಿಪಂ ಹಂಗಾಮಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್ ಹೇಳಿದರು.
ನನಗೆ ದೊರಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಸದಸ್ಯರ ಸಹಕಾರ ಪಡೆದು ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಕೃಷಿ ಚಟುವಟಿಕೆಯ ಸಮಯವಾಗಿರುವುದರಿಂದ ಪ್ರತಿಯೊಬ್ಬ ರೈತರಿಗೂ ರಿಯಾಯಿತಿ ದರದ ಬಿತ್ತನೆ ಬೀಜ ಮತ್ತು ಅಗತ್ಯವಿರುವ ರಸಗೊಬ್ಬರವನ್ನು ಅವರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ ಕಂಡಿದ್ದು ಈ ಸಂಬಂಧ ಚರ್ಚಿಸಲು ಡಿಡಿಪಿಐ ಮತ್ತು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿಶೇಷ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶ ಬರುವಂತೆ ಗಮನ ಹರಿಸಲಾಗುವುದು. ಜತೆಗೆ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಸಹಕಾರವನ್ನು ಇಲಾಖೆಗೆ ನೀಡಲಾಗುತ್ತದೆ. ಶೈಕ್ಷಣಿಕ ವರ್ಷ ಆರಂಭವಾಗಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ವಿದ್ಯಾರ್ಥಿನಿಲಯಗಳಿಗೆ ದಾಖಲಿಸಲು ಮುಂಚಿತವಾಗಿ ಅರ್ಜಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಸಕಾಲದಲ್ಲಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ಯುವ ಜೆಡಿಎಸ್ ಅಧ್ಯಕ್ಷ ಎಚ್.ಕೆ.ಸುಜಯ್, ಪುರಸಭಾ ಸದಸ್ಯರಾದ ಉಮೇಶ್, ಕೆ.ಎಲ್.ಜಗದೀಶ್, ತಾಪಂ ಸದಸ್ಯ ನಾಗಣ್ಣ, ತಾಲೂಕು ಯುವ ಜೆಡಿಎಸ್ ಉಪಾಧ್ಯಕ್ಷ ಹಳಿಯೂರು ಕೃಷ್ಣಮೂರ್ತಿ, ಜೆಡಿಎಸ್ ಮುಖಂಡರಾದ ಎಚ್.ಆರ್. ಮಧುಚಂದ್ರ, ಬಿ.ಇ. ರವಿ, ಹಳಿಯೂರು ಜಗದೀಶ್, ಸಿ.ಜಿ.ಮಧುಸೂಧನ, ಬೆಣಗನಹಳ್ಳಿ ಕೃಷ್ಣೇಗೌಡ, ಬಿ.ಕೆ. ಗಣೇಶ್, ಚೀರನಹಳ್ಳಿ ಶ್ರೀನಿವಾಸ್, ಬಡಕನಕೊಪ್ಪಲು ಮಂಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

