ಅನುದಾನರಹಿತ ಶಿಕ್ಷಕರಿಗೆ ಕೂಲಿಗಿಂತ ಕಡಿಮೆ ಸಂಬಳ
ಮೈಸೂರು: ರಾಜ್ಯ ಹಾಗೂ ದೇಶದಲ್ಲಿನ ಅನುದಾನರಹಿತ ಶಾಲಾ- ಕಾಲೇಜುಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಅಲ್ಲಿ ಕೆಲಸ ಮಾಡುವ ಶಿಕ್ಷಕರ ಬದುಕಿಗೆ ಭವಿಷ್ಯ ಇಲ್ಲದಂತಾಗಿದೆ ಎಂದು ಮೈಸೂರು ಜಿಲ್ಲಾ ಅನುದಾನರಹಿ ಶಾಲಾ ಶಿಕ್ಷಕರ ಮತ್ತು ಶಿಕ್ಷಕೇತರರ ಕ್ಷೇಮಾಭಿವೃದ್ಧಿ ಸಂಘ ಆತಂಕ ವ್ಯಕ್ತಪಡಿಸಿದೆ. ಇತ್ತೀಚೆಗೆ ಆರ್ಟಿಇ ಕಾಯಿದೆ ಅಡಿ ಶೇ.25 ರಷ್ಟು ಬಡ ಮಕ್ಕಳು ಖಾಸಗಿ ಶಾಲೆಯಲ್ಲಿ ಅವಕಾಶ ಕಲ್ಪಿಸಿರುವುದು ಸಂತೋಷ. ಆದರೆ, ಶಿಕ್ಷಕರು ಯಾವುದೇ ತಾರತಮ್ಯವಿಲ್ಲದೆ ಪಾಠ ಮಾಡುತ್ತಾರೆ. ಅವರಿಗೆ ಕೂಲಿಗಿಂತ ಕಡಿಮೆ ಸಂಬಳ ಸಿಗುತ್ತಿದೆ. ಉತ್ತಮ ಮೌಲ್ಯಾಧಾರಿತ ಶಿಕ್ಷಣ ನೀಡಿ ಉತ್ತಮ ಪ್ರಜೆಯನ್ನಾಗಿಸಲು ಅನುವಾಗುವ ಶಿಕ್ಷಕರ ಜೀವನಕ್ಕೆ ಆಧಾರ ಒದಗಿಸಿಕೊಡುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಸಂಘದ ಅಧ್ಯಕ್ಷ ಪಿ.ಎಸ್. ರಾಜಶೇಖರಮೂರ್ತಿ ತಿಳಿಸಿದರು. ಕೆಲವು ವಿದ್ಯಾಸಂಸ್ಥೆಗಳು ಶಿಕ್ಷಕರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುವುದರ ಜತೆಗೆ ವರ್ಷದಿಂದ ವರ್ಷಕ್ಕೆ ಮರು ನೇಮಕ ಮಾಡಿಕೊಳ್ಳುತ್ತಿದ್ದಾರೆ. ಶಿಕ್ಷಣ ಸಂಸ್ಥೆಯ ಏಳಿಗೆಗಾಗಿ ದುಡಿದವರ ಸಾಮರ್ಥ್ಯ, ನಿಷ್ಠೆಯನ್ನು ಸಂಸ್ಥೆ ಬಳಸಿಕೊಳ್ಳುತ್ತಿಲ್ಲ. ಇತ್ತೀಚೆಗೆ ಬಂದ 6ನೇ ವೇತನದಲ್ಲಿ ಹೆಚ್ಚುವರಿಯಾಗಿರುವ ಮೂಲವೇತನ ನಿಗದಿಗೊಳಿಸಿ ಶಿಕ್ಷಕರಿಗೆ ಸರಿಯಾದ ವೇತನ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳನ್ನು ಶ್ರೀಮಂತರ ಕಪಿಮುಷ್ಟಿಯಿಂದ ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ಲಕ್ಷಾಂತರ ಮಂದಿ ಶಿಕ್ಷಕರ ಜೀವನ ಅಧೋಗತಿಗೆ ಇಳಿಯುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

