ಜನಸಂಖ್ಯೆ ಹೆಚ್ಚಳದಿಂದ ಬಾಲಕಾರ್ಮಿಕತೆ ವೃದ್ಧಿ
ಹುಣಸೂರು: ದೇಶದ ಬಡತನ, ಅನಕ್ಷರತೆ, ಮೌಢ್ಯತೆ ಹಾಗೂ ಜನಸಂಖ್ಯೆ ಹೆಚ್ಚಳದಿಂದ ಬಾಲಕಾರ್ಮಿಕ ಪದ್ಧತಿ ವೃದ್ಧಿಯಾಗುತ್ತಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ನೀಡಿದರೆ ಮಾತ್ರ ಈ ಪದ್ಧತಿ ನಿರ್ಮೂಲನೆ ಮಾಡಬಹುದು ಎಂದು ಪಟ್ಟಣದ ಕಿರಿಯ ಶ್ರೇಣಿ ನ್ಯಾಯಾಧೀಶ ವೀರಭದ್ರಯ್ಯ ಅಭಿಪ್ರಾಯಪಟ್ಟರು.
ಪಟ್ಟಣದ ಮುನೇಶ್ವರ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಬಡತನ ಮತ್ತು ಅನಕ್ಷರತೆಯಿಂದ ಪೋಷಕರು ತಮ್ಮ ಮಕ್ಕಳನ್ನು ಅನಿವಾರ್ಯವಾಗಿ ಕೂಲಿಗೆ ತಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಅರಿವು ಮೂಡಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರದೊಂದಿಗೆ ಕೈ ಜೋಡಿಸಬೇಕಿದೆ ಎಂದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶಾಲಾ ಮಕ್ಕಳು ನಾಮಫಲಕಗಳನ್ನು ಹಿಡಿದು ಬಾಲ ಕಾರ್ಮಿಕ ಪದ್ಧತಿ ವಿರೋಧಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ಪುರಸಭೆ ಮೈದಾನದಲ್ಲಿ ಎಲ್ಲಾ ಮಕ್ಕಳಿಗೆ ಉಪನ್ಯಾಸ ಏರ್ಪಡಿಸಲಾಗಿತ್ತು.
ಪುರಸಭೆ ಮುಖ್ಯಾಧಿಕಾರಿ ರಮೇಶ್, ಸಿಡಿಪಿಒ ನವೀನ್ಕುಮಾರ್, ತಾಲೂಕು ಕಾರ್ಮಿಕ ನಿರೀಕ್ಷಕ ಶಶಿಧರ್, ವಕೀಲರ ಸಂಘದ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಪರಿಸರ ಎಂಜಿನಿಯರ್ ರವಿಕುಮಾರ್, ಮಂಜುಳ, ಡೀಡ್ ಸಂಸ್ಥೆ ನಿರ್ದೇಶಕ ಶ್ರೀಕಾಂತ್, ಪ್ರಾಧ್ಯಾಪಕ ಪುಟ್ಟಶೆಟ್ಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

