ಮಹಿಳೆ ಸೇರಿ ಇಬ್ಬರು ನಾಪತ್ತೆ
ಮೈಸೂರು: ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿ ಇಬ್ಬರು ನಾಪತ್ತೆಯಾಗಿದ್ದಾರೆ. ಮೇಟಗಳ್ಳಿ ಠಾಣೆ ವ್ಯಾಪ್ತಿ ನಿವಾಸಿ ಪ್ರಕಾಶ ಎಂಬವರ ಪತ್ನಿ ಹೇಮಲತಾ (24) ಕೆಲಸಕ್ಕಾಗಿ ಸಂದರ್ಶನಕ್ಕೆ ಹೋದವರು ಮೇ 30 ರಿಂದ ನಾಪತ್ತೆಯಾಗಿದ್ದಾರೆ. ಚಹರೆ- 5.5 ಅಡಿ ಎತ್ತರ, ಗೋದಿ ಮೈಬಣ್ಣ, ಎಡಗೈಯಲ್ಲಿ ಪಿಡಿಎಲ್ ಎಂಬ ಹಚ್ಚೆ ಇದೆ. ಕನ್ನಡ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ.0821- 2418315 ಸಂಪರ್ಕಿಸಲು ಪೊಲೀಸರು ಕೋರಿದ್ದಾರೆ. ಎನ್.ಆರ್. ಠಾಣೆ ವ್ಯಾಪ್ತಿಯ ನಿವಾಸಿ ಮಿರ್ ಸಾದಕ್ ಅಲಿ ಎಂಬವರ ಪುತ್ರ ಮೊಹಮ್ಮದ್ ಬೇಕರ್ ಅಲಿ (57) ನಾಪತ್ತೆಯಾಗಿದ್ದಾರೆ. ಚಹರೆ- 5.7 ಅಡಿ ಎತ್ತರ, ಸಾಧಾರಣ ಶರೀರ, ಗೋದಿ ಮೈಬಣ್ಣ, ದುಂಡು ಮುಖ, ಕನ್ನಡ, ಉರ್ದು ಮತ್ತು ಇಂಗ್ಲಿಷ್ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ.0821- 2418312 ಸಂಪರ್ಕಿಸಲು ಪೊಲೀಸರು ಕೋರಿದ್ದಾರೆ.
ಅಪರಿಚಿತ ಸಾವು
ಮೈಸೂರು: ನಗರದ ಗನ್ಹೌಸ್ ವೃತ್ತದಿಂದ ನಂಜನಗೂಡು ಕಡೆಗೆ ಹೋಗುವ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಗುರುವಾರ ಮೃತಪಟ್ಟಿದ್ದಾರೆ. ಚಹರೆ- 50 ವರ್ಷ, 5.6 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಗುಂಡು ಮುಖ, ಸಾಧಾರಣ ಮೈಕಟ್ಟು, ಗಡ್ಡ ಮೀಸೆ ಬಿಟ್ಟಿದ್ದಾರೆ. ಹಸಿರು ಬಣ್ಣದ ಗೆರೆಯುಳ್ಳ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ದೂ.0821- 2418319 ಸಂಪರ್ಕಿಸಲು ಕೆ.ಆರ್. ಠಾಣೆ ಪೊಲೀಸರು ಕೋರಿದ್ದಾರೆ.
ಅಂಪೈರ್ ಪರೀಕ್ಷೆಗೆ ಅರ್ಜಿ
ಮೈಸೂರು: ಕೆಎಸ್ಸಿಎಯು ಜೂ.29ಕ್ಕೆ ವಾರ್ಷಿಕ ಅಂಪೈರ್ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ಧಾರವಾಡ, ಮಂಗಳೂರು ಮತ್ತು ರಾಯಚೂರಿನಲ್ಲಿ ಆಯೋಜಿಸಿದೆ. ಆಸಕ್ತ ಅಭ್ಯರ್ಥಿಗಳು ಕೆಎಸ್ಸಿಎ ಕಚೇರಿಯಲ್ಲಿ ಅರ್ಜಿ ಪಡೆದು ಕಚೇರಿ ಅವಧಿಯಲ್ಲಿ ಖುದ್ದಾಗಿ ಅಥವಾ ಅಂಚೆ ಮೂಲಕ ಜೂ.16 ರೊಳಗೆ ಸಲ್ಲಿಸಬಹುದು. ಅಭ್ಯರ್ಥಿಗೆ 2014ರ ಸೆಪ್ಟೆಂಬರ್ 1ಕ್ಕೆ 45 ವರ್ಷ ಆಗಿರಬೇಕು. ಆಸಕ್ತರಿಗೆ ಕೆಎಸ್ಸಿಎಯು ಪರೀಕ್ಷೆ ನಡೆಯುವ ವಲಯ ಕಚೇರಿಗಳಲ್ಲಿ ತರಬೇತಿ ಶಿಬಿರ ಆಯೋಜಿಸಿದೆ. ಹೆಚ್ಚಿನ ಮಾಹಿತಿಗೆ ಮೈಸೂರು ಕೆಎಸ್ಸಿಎ ಕಚೇರಿ ದೂ.0821- 2519900 ಸಂಪರ್ಕಿಸಬಹುದು ಎಂದು ಸಂಚಾಲಕ ಬಾಲಚಂದರ್ ತಿಳಿಸಿದ್ದಾರೆ.
ಜೂಜಾಟ: ಆರು ಬಂಧನ
ಮೈಸೂರು: ನಗರದ ಚಾಮುಂಡಿಬೆಟ್ಟದ ಪಾದದ ಬಳಿ ಜೂಜಾಡುತ್ತಿದ್ದ 6 ಜನರನ್ನು ಕೆ.ಆರ್. ಠಾಣೆ ಪೊಲೀಸರು ಬಂಧಿಸಿ 11,475, 7 ಮೊಬೈಲ್ ಹಾಗೂ 9 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಗೌರಿಶಂಕರನಗರದ ನಟೇಶ್, ಕಾಕರವಾಡಿ ಭರತ್, ಬಸವೇಶ್ವರ ರಸ್ತೆಯ ನಾಗರಾಜು, ಸುಭಾಷ್ನಗರದ ಅಬ್ದುಲ್ ಬಾಷ, ಬಂಡಿಪಾಳ್ಯದ ಮಹೇಶ್ ಮತ್ತು ಶ್ರೀರಾಮಪುರದ ಅಶೋಕ್ ಬಂಧಿತರು. ಇವರೊಂದಿಗಿದ್ದ ಮೂವರು ಪರಾರಿಯಾಗಿದ್ದಾರೆ. ಕೆ.ಆರ್. ಉಪ ವಿಭಾಗದ ಎಸಿಪಿ ಬಿ.ಟಿ. ಕವಿತಾ ನೇತೃತ್ವದಲ್ಲಿ ಕೆ.ಆರ್. ಠಾಣೆಯ ಇನ್ಸ್ಪೆಕ್ಟರ್ ಎಚ್.ಪರಶುರಾಮಪ್ಪ ಮತ್ತು ಸಿಬ್ಬಂದಿ ಈ ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

