ರಾಜರಾಜೇಶ್ವರಿ ದೇವತಾ ಪ್ರತಿಷ್ಠಾಪನೆ
ಮೈಸೂರು: ನಗರದ ಬಿಇಎಂಎಲ್ ಬಡಾವಣೆಯಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ದೇವತಾ ಪ್ರತಿಷ್ಠಾಪನಾ ಮಹೋತ್ಸವದ ಧಾರ್ಮಿಕ ಸಭೆಯು ಅದ್ಧೂರಿಯಾಗಿ ನೆರವೇರಿತು.
ಬೆಳಗ್ಗೆಯಿಂದ ಸ್ಥಾಪಿತ ದೇವತಾ ಪೂಜೆ, ಹೋಮ, ಪ್ರತಿಷ್ಠೆ, ನಿರೀಕ್ಷೆ, ಕುಂಭಾಭಿಷೇಕ, ಮಹಾಮಂಗಳಾರತಿ ನೆರವೇರಿತು. ಮಹೋತ್ಸವದಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಬೇಬಿ ಮಠದ ಪೀಠಾಧಿಪತಿ ತ್ರಿನೇತ್ರ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಜಿ.ಟಿ.ದೇವೇಗೌಡ, ಸಂಸದ ಪ್ರತಾಪ್ ಸಿಂಹ ಅವರ ಪತ್ನಿ ಅರ್ಪಿತಾ ಸಿಂಹ, ಬಿಇಎಂಎಲ್ ಮುಖ್ಯ ಪ್ರಧಾನ ವ್ಯವಸ್ಥಾಪಕ ಆರ್.ಪನ್ನೀರ್ ಸೆಲ್ವಂ, ಪಾಲಿಕೆ ಸದಸ್ಯ ಜಿ.ಎಸ್.ಜಗದೀಶ್, ಸ್ಕೈಟಾಪ್ ಬಿಲ್ಡರ್ಸ್ ಎಂಡಿ ಬಿ.ಎಲ್. ನಾಗೇಂದ್ರಪ್ರಸಾದ್, ಬಿಇಎಂಎಲ್ ಎಸ್ಸಿ- ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ. ನಾರಾಯಣ ಇದ್ದರು.
ಅಲ್ಪಸಂಖ್ಯಾತರ ಪುನರ್ವಸತಿ
ಮೈಸೂರು: ಲಿಂಗತ್ವ ಅಲ್ಪಸಂಖ್ಯಾತರ (ಮಂಗಳಮುಖಿಯರು) ಪುನರ್ವಸತಿ ಯೋಜನೆಯಡಿ ಜಿಲ್ಲೆಯಲ್ಲಿ 2,332 ಫಲಾನುಭವಿಗಳನ್ನು ಗುರುತಿಸಲಾಗಿದ್ದು, 2013-14ನೇ ಸಾಲಿಗೆ 86 ಫಲಾನುಭವಿಗಳಿಗೆ ಉದ್ಯಮಶೀಲತಾ ತರಬೇತಿ ನಡೆಸಲಾಗುತ್ತಿದೆ. ನಿಗಮದ ವತಿಯಿಂದ ಸ್ವ ಉದ್ಯೋಗ ಕೈಗೊಳ್ಳಲು ತಲಾ 20 ಸಾವಿರದಂತೆ ಒಟ್ಟು 17.20 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ತರಬೇತಿ ಪೂರ್ಣಗೊಂಡ ನಂತರ ಸಹಾಯಧನ ವಿತರಿಸಲಾಗುವುದು. ಮಾರುಕಟ್ಟೆ ನೆರವು ಯೋಜನೆಯಡಿ 2013-14ನೇ ಸಾಲಿನಲ್ಲಿ 105 ಮಹಿಳಾ ಉದ್ಯಮಿಗಳು ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯರು ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಉಚಿತ ಮಳಿಗೆಗಳ ಪ್ರಯೋಜನ ಪಡೆದಿದ್ದಾರೆ.
ಜಿಲ್ಲೆಯಲ್ಲಿ 8 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ನೊಂದ ಮಹಿಳೆಯರ ನೆರವಿಗೆ ಶ್ರಮಿಸುತ್ತಿವೆ. ಒಟ್ಟು 1,409 ಪ್ರಕರಣಗಳು ದಾಖಲಾಗಿದ್ದು, 1,252 ಪ್ರಕರಣಗಳನ್ನು ಇತ್ಯರ್ಥ್ಯಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

