ಮೈಸೂರು

ಸೋಮನಳಮ್ಮ ದೇವಸ್ಥಾನದ ವಾರ್ಷಿಕೋತ್ಸವಕ್ಕೆ ಚಾಲನೆ

Published On :

ಮೈಸೂರು: ಹೆಬ್ಬಾಳು ಒಂದನೇ ಹಂತದಲ್ಲಿರುವ ಭೈರವೇಶ್ವರನಗರದ ಶ್ರೀಲಕ್ಷ್ಮೀ ಸೋಮನಳಮ್ಮ ದೇವಸ್ಥಾನದ ಎರಡನೇ ವಾರ್ಷಿಕೋತ್ಸವ ಶುಕ್ರವಾರ ಆರಂಭವಾಯಿತು. ಶ್ರೀ ಲಕ್ಷ್ಮೀದೇವಿ ಸೋಮಳಮ್ಮನವರ ದೇವಸ್ಥಾನ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬೆಳಗ್ಗೆ ಕೆ.ಆರ್.ಎಸ್ ರಸ್ತೆಯಲ್ಲಿರುವ ಅಣ್ಣಯ್ಯಪ್ಪ ಸಮುದಾಯ ಭವನದ ಗಣಪತಿ ದೇವಸ್ಥಾನದಿಂದ 101 ಕಳಶಗಳನ್ನು ನಾದಸ್ವರ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ತರಲಾಯಿತು. ಮಧ್ಯಾಹ್ನ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸುದರ್ಶನ ಹೋಮ, ಗಣಪತಿ ಪೂಜೆ ನಡೆಯಿತು. ಸಂಜೆ ಲಕ್ಷ್ಮೀ ಹೋಮ, ಶಾಂತಿ ಹೋಮ ಹಾಗೂ ಅಮ್ಮನವರಿಗೆ ಅರಿಶಿನ ಅಲಂಕಾರ ನಡೆಯಿತು. 14 ರಂದು (ಇಂದು) ಬೆಳಗ್ಗೆ 5 ರಿಂದ 10.30 ರವರೆಗೆ ರುದ್ರಾಭಿಷೇಕ ಹಾಗೂ ಪೂರ್ಣಾಹುತಿ ನಡೆಯಲಿದ್ದು, ಮಧ್ಯಾಹ್ನ 12 ಕ್ಕೆ ಅನ್ನಸಂತಪರ್ಣೆ ಏರ್ಪಡಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಸುಬ್ಬೇಗೌಡ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.