ಮೈಸೂರು

ಕೈ ಗೆಲವಿಗೆ ಅಧಿಕಾರ ಬಳಕೆ ಕಾರಣ

Published On :

ಟಿ. ನರಸೀಪುರ: ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರ ಪ್ರಭಾವ, ಹಣ ಬಲದಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಟಿ.ಡಿ.ಗಣೇಶ್ ಆರೋಪಿಸಿದರು.
ಪಟ್ಟಣದ ಸರ್ಕಾರಿ ಅತಿಥಿಗೃಹದಲ್ಲಿ ನಡೆದ ನರಸೀಪುರ ಬಿಜೆಪಿಯ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸೇರಿದಂತೆ ದೇಶಾದ್ಯಂತ ನರೇಂದ್ರ ಮೋದಿ ಅವರ ಅಲೆ ಇದ್ದಿದ್ದರಿಂದಲೇ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು. ನೆರೆಯ ಮೈಸೂರು ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಮೋದಿ ಅಲೆಯ ನಡುವೆಯೂ ಚಾಮರಾಜನಗರದಲ್ಲಿ ಕಾಂಗ್ರೆಸ್ ಗೆಲ್ಲಲು ಅಧಿಕಾರದ ಪ್ರಭಾವ ಹಾಗೂ ಹಣ ಬಳಕೆಯಾಯಿತು ಎಂದು ದೂರಿದರು.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ ಮೂಲಕ ಪಕ್ಷದ ಸಂಘಟನೆ ಮಾಡಲು ಮುಖಂಡರು ಹಾಗೂ ಕಾರ್ಯಕರ್ತರು ಶ್ರಮವಹಿಸಿ ದುಡಿಯಬೇಕು. ನರಸೀಪುರ ಉಸ್ತುವಾರಿಯನ್ನು ರಾಜ್ಯ ಸಮಿತಿ ನೀಡಿದ್ದರಿಂದ ಮಾಸಿಕ ಸಭೆಯಲ್ಲಿ ಮೊದಲ ಬಾರಿಗೆ ಆಗಮಿಸಿದ್ದೇನೆ. ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗೆ ಕಾರ್ಯಕರ್ತರು ನೀಡುವ ಸಲಹೆಯನ್ನು ರಾಜ್ಯ ಸಮಿತಿಗೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.
ಜಿಪಂ ಮಾಜಿ ಸದಸ್ಯ, ಹಿರಿಯ ಮುಖಂಡ ಪುಟ್ಟಬಸವಯ್ಯ ಮಾತನಾಡಿದರು. ಸಭೆಯಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ಕೆ.ಎಸ್. ಬಸವರಾಜು, ಜಿಲ್ಲಾ ಕಾರ್ಯದರ್ಶಿ ಚಿದಂಬರ್, ಉಪಾಧ್ಯಕ್ಷ ಮಹದೇವಯ್ಯ, ತಾಪಂ ಸದಸ್ಯ ಬಸವರಾಜು, ರೈತ ಮೋರ್ಚಾದ ಅಧ್ಯಕ್ಷ ರಂಗರಾಜು, ಟೌನ್ ಅಧ್ಯಕ್ಷ ಎಸ್.ದಿಲೀಪ್, ಯುವ ಮೋರ್ಚಾ ಅಧ್ಯಕ್ಷ ವಿಜಯಕುಮಾರ್, ಎಸ್ಟಿ ಮೋರ್ಚಾ ಅಧ್ಯಕ್ಷ ಕುಮಾರ್, ಮಹಿಳಾ ಮೋರ್ಚಾ ಅಧ್ಯಕ್ಷ ಮೀನಾಕ್ಷಿ, ಸ್ಲಂ ಮೋರ್ಚಾ ಅಧ್ಯಕ್ಷ ಮಣಿಕಂಠ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.