ಮೈಸೂರು

ಕೌಶಲಯುತ ವ್ಯಕ್ತಿತ್ವ ಬೆಳೆಸಿಕೊಳ್ಳಿ

Published On :

ಮೈಸೂರು: ಕಂಪನಿಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಕೌಶಲಯುತ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ್ ಕೆ.ಶೆಣೈ ಕರೆ ನೀಡಿದರು.
ಜಗನ್ಮೋಹನ ಅರಮನೆಯಲ್ಲಿ ನರಸಿಂಹರಾಜ ಮೊಹಲ್ಲಾದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ಸೋಮವಾರ ಏರ್ಪಡಿಸಿದ್ದ ಸಂಸ್ಥೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಕಂಪನಿಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದರೂ ಕೌಶಲ ಕೊರತೆಯಿಂದ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುತ್ತಿಲ್ಲ. ಹಾಗಾಗಿ ಮೊದಲು ಕೌಶಲ್ಯಯುಕ್ತ ವಿದ್ಯಾರ್ಥಿಗಳಾಗಿ ರೂಪುಗೊಳ್ಳಬೇಕು. ಜತೆಗೆ ಹೊಸ ತಂತ್ರಜ್ಞಾನಗಳ ಬಗ್ಗೆ ತಿಳಿದುಕೊಳ್ಳುವ ಮೂಲಕ ಹೊಸತನ್ನು ಕಂಡು ಹಿಡಿಯಬೇಕು ಎಂದು ಸಲಹೆ ನೀಡಿದರು. ಮುಂದುವರಿಯುತ್ತಿರುವ ದೇಶಗಳ ಪೈಕಿ ಭಾರತವೂ ಒಂದಾಗಿದ್ದು, ಅದರಲ್ಲಿ ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಯು ಕೈಗಾರಿಕೆ ಅವಲಂಭಿಸಿದೆ. ಇಂತಹ ಸಂದರ್ಭದಲ್ಲಿ ಐಟಿಐ ವಿದ್ಯಾರ್ಥಿಗಳು ಕೇವಲ ಉದ್ಯೋಗ ಪಡೆಯುವುದಕ್ಕೆ ಸೀಮಿತವಾಗದೇ, ಉನ್ನತ ವ್ಯಾಸಂಗದ ಕಡೆಗೂ ಮುಖ ಮಾಡಬೇಕು ಎಂದು ಕಿವಿಮಾತು ಹೇಳಿದರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಕೆ.ಸಿ.ರವಿಶಂಕರ್, ಉಪಪ್ರಾಂಶುಪಾಲ ಕೆ.ಎಂ. ಮಹೇಶ್, ಮಂಜುನಾಥ್ ಇದ್ದರು. ಈ ವೇಳೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿಭಾವಂತರಿಗೆ ಬಹುಮಾನ ವಿತರಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.