ಮೈಸೂರು

ತಂಬಾಕು ನಿಷೇಧ ಕಾಯ್ದೆ ಪಾಲಿಸದಿದ್ದಲ್ಲಿ ಶಿಕ್ಷೆ

Published On :

ಮೈಸೂರು: ತಂಬಾಕು ನಿಯಂತ್ರಣ ಕಾಯ್ದೆ 2003 ಜಾರಿಗೆ ತರಲಾಗಿದ್ದು, ಇದನ್ನು ಉಲ್ಲಂಘಿಸಿದವರಿಗೆ ದಂಡ, ಶಿಕ್ಷೆ ವಿಧಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಟಿ. ಪುಟ್ಟಸ್ವಾಮಿ ಹೇಳಿದ್ದಾರೆ.
ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ನಿಷೇಧ ಕಾಯಿದೆ-2003ರ ಸೆಕ್ಷನ್ 4ರಂತೆ ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧಿಸಿದೆ. ಈ ನಿಯಮ ಪಾಲಿಸಿದಿದ್ದಲ್ಲಿ 200 ರವರೆಗೆ ದಂಡ ವಿಧಿಸಲಾಗುವುದು. ಸೆಕ್ಷನ್ 5ರ ಪ್ರಕಾರ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ನಿಷೇಧಿಸಿದ್ದು, ಮೊದಲ ಉಲ್ಲಂಘನೆಯಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅಥವಾ ಒಂದು ಸಾವಿರ ದಂಡ ಅಥವಾ ಎರಡನ್ನೂ ವಿಧಿಸಬಹುದು. ಎರಡನೇ ಉಲ್ಲಂಘನೆಯಲ್ಲಿ 5 ವರ್ಷ ಜೈಲು ಶಿಕ್ಷೆ ಅಥವಾ 5 ಸಾವಿರ ದಂಡ ಅಥವಾ ಎರಡನ್ನು ವಿಧಿಸಬಹುದು. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಹಾಗೂ ಶಾಲಾ ಕಾಲೇಜುಗಳ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು. ಸೆಕ್ಷನ್ 6ರ ಪ್ರಕಾರ ನಿಷೇಧಿಸಲಾಗಿದ್ದು, ಇದನ್ನು ಉಲ್ಲಂಘಿಸಿದವರಿಗೆ 200ರವರೆಗೆ ದಂಡ ವಿಧಿಸಬಹುದು. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿರ್ಧಿಷ್ಟ ಆರೋಗ್ಯದ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವುದನ್ನು ನಿಷೇಧಿಸಿದೆ. ಇದನ್ನು ಉಲ್ಲಂಘಿಸುವ ಉತ್ಪಾದಕರಿಗೆ ಮೊದಲನೆ ಬಾರಿ ಎರಡು ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡ, ಎರಡನೇ ಬಾರಿಗೆ 5 ವರ್ಷ ಜೈಲು ಶಿಕ್ಷೆ ಅಥವಾ 10 ಸಾವಿರ ದಂಡ ಅಥವಾ ಎರಡನ್ನು ವಿಧಿಸಬಹುದು. ಮಾರಾಟ, ಚಿಲ್ಲರೆ ವ್ಯಾಪಾರಸ್ಥರಿಗೆ ಮೊದಲನೇ ಉಲ್ಲಂಘನೆಯಲ್ಲಿ ಎರಡು ವರ್ಷ ಜೈಲು ಶಿಕ್ಷೆ ಹಾಗೂ ರು. ಒಂದು ಸಾವಿರ ದಂಡ, ಎರಡನೇ ಉಲ್ಲಂಘನೆಯಲ್ಲಿ 5 ವರ್ಷ ಜೈಲು ಹಾಗೂ 3 ಸಾವಿರ ದಂಡ ವಿಧಿಸಬಹುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.