ಮೈಸೂರು

21 ರಂದು ಲೋಕಾಯುಕ್ತರಿಂದ ದೂರುಗಳ ವಿಚಾರಣೆ

Published On :

ಮೈಸೂರು: ಕರ್ನಾಟಕ ಲೋಕಾಯುಕ್ತ ನ್ಯಾಯಾಧೀಶ ಡಾ.ವೈ. ಭಾಸ್ಕರ ರಾವ್ ಅವರು ಜೂ.21ರ ಬೆಳಗ್ಗೆ 10ಕ್ಕೆ ಮೈಸೂರು ಜಿಲ್ಲಾ ವ್ಯಾಪ್ತಿಯ ಬಾಕಿ ಇರುವ ಹಾಗೂ ಸ್ವೀಕೃತವಾಗುವ ದೂರುಗಳ ವಿಚಾರಣೆ ನಡೆಸುವರು.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಮನವಿಗಳ ಹಾಗೂ ದೂರುಗಳ ಪರಿಶೀಲನೆಯಲ್ಲಿ ವಿಳಂಬ, ಅಧಿಕಾರ ದುರುಪಯೋಗ, ಸರ್ಕಾರಿ ಹಣ ದುರುಪಯೋಗ, ದುರಾಡಳಿತ, ಭ್ರಷ್ಟಾಚಾರ ಇತ್ಯಾದಿಗಳ ಬಗ್ಗೆ ಸಾರ್ವಜನಿಕರು ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ನಮೂನೆ- 1 ಹಾಗೂ ನಮೂನೆ- 2 ರಲ್ಲಿ ಕ್ರಮಬದ್ಧವಾಗಿ ಸಲ್ಲಿಸುವ ದೂರುಗಳನ್ನು ಸ್ವೀಕರಿಸಿ, ನೋಂದಾಯಿಸುವ ಕಾರ್ಯಕ್ರಮವನ್ನು ಜೂ.20ರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ದಿವಾನ್ಸ್ ರಸ್ತೆಯಲ್ಲಿರುವ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಲೋಕಾಯುಕ್ತ ನ್ಯಾ.ಡಾ.ವೈ. ಭಾಸ್ಕರ ರಾವ್ ಅವರು ಜೂ.21ರ ಬೆಳಗ್ಗೆ 10 ರಿಂದ ಸಂಜೆಯವರೆಗೆ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಲೋಕಾಯುಕ್ತ ಕಾಯಿದೆ, 1984ರ ಅಡಿಯಲ್ಲಿ ನಮೂನೆ-1 ಹಾಗೂ 2ರಲ್ಲಿ ಸಲ್ಲಿಸುವ ಹಾಗೂ ವಿಚಾರಣಾ ಹಂತಗಳಲ್ಲಿರುವ ಮೈಸೂರು ಜಿಲ್ಲಾ ವ್ಯಾಪ್ತಿಯ ಅರ್ಜಿಗಳ ವಿಚಾರಣೆ ನಡೆಸುವರು. ನೊಂದ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ವಿಭಾಗದ ಲೋಕಾಯುಕ್ತ ಎಸ್ಪಿ ಎಸ್.ಎಂ. ಜಗದೀಶ್‌ಪ್ರಸಾದ್, ಪ್ರಭಾರ ಜಿಲ್ಲಾಧಿಕಾರಿ ಎಸ್. ಪಾಲಯ್ಯ ತಿಳಿಸಿದ್ದಾರೆ.
ಲೋಕಾಯುಕ್ತರ ಪ್ರವಾಸ: ಲೋಕಾಯುಕ್ತ ನ್ಯಾಯಾಧೀಶ ಡಾ.ವೈ. ಭಾಸ್ಕರ ರಾವ್ ಅವರು ಜೂ.19 ರಂದು ಬೆಂಗಳೂರಿನಿಂದ ಹೊರಟು ಸಂಜೆ 6ಕ್ಕೆ ಮೈಸೂರಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜೂ.20 ರಂದು ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಹಾಗೂ ಇತರೆ ಬುಡಕಟ್ಟು ಪ್ರದೇಶಗಳಿಗೆ ಭೇಟಿ ನೀಡಿ ಸಂಜೆ ಮೈಸೂರಿಗೆ ವಾಪಸಾಗಿ ವಾಸ್ತವ್ಯ ಮಾಡುವರು. ಜೂ.21ರ ಬೆಳಗ್ಗೆ 10ಕ್ಕೆ  ಮೈಸೂರಿನಲ್ಲಿ ಬಾಕಿ ಇರುವ ಪ್ರಕರಣಗಳ ಹಾಗೂ ಹೊಸದಾಗಿ ಸ್ವೀಕೃತವಾಗುವ ಪ್ರಕರಣಗಳ ವಿಚಾರಣೆ ನಡೆಸಿ, ವಾಸ್ತವ್ಯ ಮಾಡುವರು. ಜೂ. 22 ರಂದು ಮೈಸೂರಿನಿಂದ ಶಿವಮೊಗ್ಗಕ್ಕೆ ತೆರಳುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.