ಹೊಸಹುಂಡಿ ಗ್ರಾಪಂ ಅಕ್ರಮಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಮೈಸೂರು: ತಾಲೂಕಿನ ಹೊಸಹುಂಡಿ ಗ್ರಾಪಂ ಅಕ್ರಮಗಳ ಆಗರವಾಗಿದೆ ಎಂದು ಸಮಾಜ ಪರಿವರ್ತನ ಜನಾಂದೋಲನದ ಜಿಲ್ಲಾಧ್ಯಕ್ಷ ಎಂ. ರವೀಂದ್ರ, ಪ್ರಧಾನ ಕಾರ್ಯದರ್ಶಿ ಶಾಲಿನಿ ಎಸ್. ಕೌಂಡಿನ್ಯ, ಉಪಾಧ್ಯಕ್ಷ ಕೇಶವ ನಾಗರಾಜ, ತಾಲೂಕು ಅಧ್ಯಕ್ಷ ರಾಜಣ್ಣ ಆರೋಪಿಸಿದ್ದಾರೆ.
ಈ ಹಿಂದೆಯೂ ಅಕ್ರಮಗಳು ನಡೆದಿರುವುದು ಜಿಪಂ ತನಿಖಾ ವರದಿಯಲ್ಲಿ ಸಾಬೀತಾಗಿದ್ದರೂ ಇದಕ್ಕೆ ಕಡಿವಾಣ ಹಾಕುವಲ್ಲಿ ಜಿಪಂ ಸಿಇಒ ಆಸಕ್ತಿ ತೋರುತ್ತಿಲ್ಲ. ಗ್ರಾಪಂನಲ್ಲಿ ಕೇಂದ್ರ ಸರ್ಕಾರದ ಉದ್ಯೋಗ ಖಾತ್ರಿ ಅನುದಾನದ ಪೈಕಿ 13.93 ಲಕ್ಷ ರು. ಲೆಕ್ಕವಿಲ್ಲದಿರುವುದು ಹಾಗೂ ಸದರಿ ಹಣವನ್ನು ಆರೋಪಿತರಿಂದ ಮುಟ್ಟುಗೋಲು ಹಾಕಿಕೊಳ್ಳಲು ಜಿಪಂನ ಬಂಬಡ್ಸ್ಮೆನ್ ನ್ಯಾಯಾಲಯದಿಂದ 45 ದಿನಗಳ ಒಳಗಾಗಿ ಸಿವಿಲ್ ದಾವೆ ಹೂಡುವಂತೆ ಆದೇಶವಿದ್ದರೂ ದುರುಪಯೋಗವಾಗಿರುವ ಸರ್ಕಾರಿ ಹಣವನ್ನು ಮಟ್ಟುಗೋಲು ಹಾಕಿಕೊಳ್ಳುವ ನಿಟ್ಟಿನಲ್ಲಿ ವರ್ಷವಾದರೂ ಯಾವುದೇ ಕ್ರಮವಹಿಸಿರುವುದಿಲ್ಲ ಎಂದು ದೂರಿದ್ದಾರೆ. ಈ ಬಗ್ಗೆ ತಕ್ಷಣ ಕ್ರಮ ವಹಿಸದಿದ್ದರೆ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

