ಮೈಸೂರು

ಚಿರತೆ ಬೋನಿಗೆ

Published On :

ಕ.ಪ್ರ. ವಾರ್ತೆ, ಮೈಸೂರು, ಜೂ.18
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಬಡಾವಣೆಯ ನಿವಾಸಿಗಳಲ್ಲಿ ಆತಂಕ ಮೂಡಿಸಿದ್ದ ಚಿರತೆಯು ಬೋನಿಗೆ ಬಿದ್ದಿರುವ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಕಳೆದ ಎರಡು ತಿಂಗಳಿಂದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಗೌರಿಶಂಕರನಗರ ಮತ್ತು ಇತರೆ ಪ್ರದೇಶಗಳಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಇತ್ತೀಚೆಗಷ್ಟೇ 2 ನಾಯಿಗಳನ್ನು ಚಿರತೆ ಬೇಟೆಯಾಡಿ ತಿಂದಿತ್ತು.
ಈ ಹಿನ್ನೆಲೆಯಲ್ಲಿ ಬೆಟ್ಟದ ತಪ್ಪಲಿನಲ್ಲಿರುವ ಪಂಚಗವಿ ಮಠದ ಬಳಿ ಅರಣ್ಯ ಇಲಾಖೆಯವರು ಬೋನು ಇರಿಸಿದ್ದರು. ರಾತ್ರಿ ಆಹಾರ ಅರಿಸಿಕೊಂಡ ಬಂದಿರುವ ಚಿರತೆ ಬೋನಿಗೆ ಸಿಕ್ಕಿ ಬಿದ್ದಿದೆ. ಈ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಸೆರೆ ಸಿಕ್ಕ ಚಿರತೆಯನ್ನು ಕಾಡಿಗೆ ಸಾಗಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.