ಮೈಸೂರು

ಪಿಯುಸಿ ಪಠ್ಯಪುಸ್ತಕ ಸಮಸ್ಯೆ ಪರಿಹಾರಕ್ಕೆ ಆಗ್ರಹ

Published On :

ಮೈಸೂರು: ಪಿಯುಸಿ ಪಠ್ಯಪುಸ್ತಕ ಸರಬರಾಜಿನಲ್ಲಿ ಉಂಟಾಗಿರುವ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಎಐಡಿಎಸ್‌ಒ ಕಾರ್ಯಕರ್ತರು ಹಾಗೂ ಪಿಯುಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟಿಸಿದರು.
ಪಿಯು ಕಾಲೇಜು ಆರಂಭವಾಗಿ 15 ದಿನಗಳಾಗಿದ್ದರೂ ಮಾರುಕಟ್ಟೆಯಲ್ಲಿ ಪಿಯುಸಿ ಪಠ್ಯಪುಸ್ತಕಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಾಗುತ್ತಿಲ್ಲ. ಇದರಿಂದ ಪಾಠ ಪ್ರವಚನಕ್ಕೆ ತೊಂದರೆಯಾಗಿದ್ದು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೆ ಪಠ್ಯಪುಸ್ತಕ ಮುದ್ರಣಕ್ಕೆ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳದಿರುವುದೇ ಈಗಿನ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಆರೋಪಿಸಿದರು.
ದ್ವಿತೀಯ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಸಿಬಿಎಸ್‌ಇ ಆಧಾರಿತ ಹೊಸ ಪಠ್ಯಕ್ರಮ ಜಾರಿಗೆ ತರಲು ಈ ಹಿಂದೆಯೇ ಸರ್ಕಾರ ನಿರ್ಧರಿಸಿತ್ತು. ಆದರೆ, ಈ ನಿರ್ಧಾರದಂತೆ ಸಮರ್ಪಕ ಕ್ರಮ ವಹಿಸಿಲ್ಲ. ಪಿಯುಸಿ ಎರಡೂ ವರ್ಷದ ವಿಜ್ಞಾನ ಪಠ್ಯಪುಸ್ತಕ, ಮೊದಲ ವರ್ಷದ ಕಲಾ ಮತ್ತು ವಾಣಿಜ್ಯ ಪಠ್ಯಪುಸ್ತಕಗಳ ಮುದ್ರಣ ಪೂರ್ಣಗೊಂಡಿಲ್ಲ ಎಂದು ದೂರಿದರು. ಪಿಯುಸಿ ಪಠ್ಯಪುಸ್ತಕಗಳ ಮುದ್ರಣಕ್ಕೆ ಸಮರೋಪಾದಿಯಲ್ಲಿ ಕ್ರಮ ವಹಿಸಬೇಕು. ಏಕಕಾಲಕ್ಕೆ ಹತ್ತಾರು ಕಡೆ ಮುದ್ರಣ ಕಾರ್ಯ ಆರಂಭಿಸಿ, ವಿದ್ಯಾರ್ಥಿಗಳ ಅವಶ್ಯಕತೆ ಕೂಡಲೇ ಪೂರೈಸಬೇಕು ಎಂದು ಒತ್ತಾಯಿಸಿದರು. ಎಐಡಿಎಸ್‌ಒ ಮುಖಂಡರಾದ ಎಚ್.ಎಂ. ಬಸವರಾಜು, ರವಿ, ಚಂದ್ರಕಲಾ, ಮಹೇಶ್, ಸುನಿಲ್, ಸುಮ, ಗೌತಮ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.