ಮೈಸೂರು ವಿವಿ ಗ್ರಂಥಾಲಯ ಸುವರ್ಣ ಮಹೋತ್ಸವ 24ರಂದು
ಮೈಸೂರು: ಮೈಸೂರು ವಿವಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸುವರ್ಣ ಮಹೋತ್ಸವ ಸಮಾರಂಭವನ್ನು ಜೂ.24ರ ಬೆಳಗ್ಗೆ 10ಕ್ಕೆ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕೋಲ್ಕತಾದ ಭಾರತದ ರಾಷ್ಟ್ರೀಯ ಗ್ರಂಥಾಲಯದ ನಿರ್ದೇಶಕ ಹಾಗೂ ವಿಭಾಗದ ಹಳೆಯ ವಿದ್ಯಾರ್ಥಿ ಡಾ.ಪಿ.ವೈ.ರಾಜೇಂದ್ರಕುಮಾರ್ ಸಮಾರಂಭ ಉದ್ಘಾಟಿಸುವರು. ವಿಶ್ರಾಂತ ಕುಲಪತಿ ಹಾಗೂ ಬೆಂಗಳೂರು ರೇವಾ ವಿವಿ ಕುಲಪತಿ ಪ್ರೊ.ವಿ.ಜಿ. ತಳವಾರ್ ಅತಿಥಿಗಳಾಗುವರು. ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅಧ್ಯಕ್ಷತೆ ವಹಿಸುವರು ಎಂದು ವಿಭಾಗದ ಮುಖ್ಯಸ್ಥ ಪ್ರೊ.ಎಂ. ಚಂದ್ರಶೇಖರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮಾರಂಭದ ಉದ್ಘಾಟನೆ ನಂತರ ಭಾರತದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಶಿಕ್ಷಣ ಕುರಿತು ಚರ್ಚೆ ನಡೆಯಲಿದೆ. ಹಳೆಯ ವಿದ್ಯಾರ್ಥಿಗಳ ಕೂಟದಲ್ಲಿ ಮುಂದಿನ ವರ್ಷದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮ ಹಾಗೂ ವಿಭಾಗವನ್ನು ಉನ್ನತ ದರ್ಜೆಗೆ ಏರಿಸಲು ಚರ್ಚಿಸಲಾಗುವುದು. ನಂತರ ನಡೆಯುವ ಭಾರತದಲ್ಲಿ ಗ್ರಂಥಾಲಯ ಮತ್ತು ವಿಜ್ಞಾನ ವಿಭಾಗದ ಪರಿಕಲ್ಪನೆ ಕುರಿತ ದುಂಡು ಮೇಜಿನ ಸಭೆಯಲ್ಲಿ 5 ಮಂದಿ ಪ್ರಾಧ್ಯಾಪಕರು, 7 ಮಂದಿ ಗ್ರಂಥಪಾಲಕರು, ಮಾಹಿತಿ ವಿಜ್ಞಾನಿಗಳು ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದರು. ಗ್ರಂಥಾಲಯ ವಿಭಾಗವು 1965ರಿಂದ ಗ್ರಂಥಾಲಯ ವಿಜ್ಞಾನದಲ್ಲಿ ಬ್ಯಾಚುಲರ್ (ಬಿಲಿಬ್) ಡಿಗ್ರಿ ನಡೆಸುತ್ತಿತ್ತು. 1971ರಲ್ಲಿ ಸ್ನಾತಕೋತ್ತರ ಪದವಿ, 1996 ರಿಂದ ಪಿಎಚ್ಡಿ ಪದವಿ ಆರಂಭಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

