ಅಂಕನಹಳ್ಳಿ ರಸ್ತೆ ಕಾಮಗಾರಿಗೆ ಚಾಲನೆ
ಭೇರ್ಯ: ಕೆ.ಆರ್. ನಗರ ತಾಲೂಕಿನ ತೀರಾ ಹದಗೆಟ್ಟಿದ್ದ ಅಂಕನಹಳ್ಳಿ ಗ್ರಾಮ ಪರಿಮಿತಿ ರಸ್ತೆಯನ್ನು 1.70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಅಂಕನಹಳ್ಳಿ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಹಂತ ಹಂತವಾಗಿ ಕ್ಷೇತ್ರದ ಎಲ್ಲಾ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು. ಈ ಭಾಗದ 28 ಗ್ರಾಮಗಳಿಗೆ ಶಾಶ್ವತ ಶುದ್ಧ ಕುಡಿಯುವ ನೀರು ಪೂರೈಕೆಗಾಗಿ 29 ಕೋಟಿ ಮಂಜೂರಾಗಿದ್ದು, ಶೀಘ್ರದಲ್ಲೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸುವುದಾಗಿ ಹೇಳಿದರು. ಈ ಭಾಗದ ಗ್ರಾಮಗಳಿಗೆ 2 ತಿಂಗಳೊಳಗೆ ನಿರಂತರ ಜ್ಯೋತಿ ಯೋಜನೆಯಡಿ ಗುಣಮಟ್ಟದ ವಿದ್ಯುತ್ ಪೂರೈಕೆ ಆಗಲಿದೆ ಎಂದು ಹೇಳಿದರು.
ಶ್ರೀ ರಾಮಮಂದಿರ, ಅಪೂರ್ಣವಾದ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲು ಗ್ರಾಮಸ್ಥರು ಈ ವೇಳೆ ಶಾಸಕರಲ್ಲಿ ಮನವಿ ಮಾಡಿದರು. ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಎ.ಟಿ.ಸೋಮಶೇಖರ್, ಎಪಿಎಂಸಿ ನಿರ್ದೇಶಕಿ ರೂಪಶ್ರೀ, ತಾಪಂ ಮಾಜಿ ಸದಸ್ಯ ಗೋವಿಂದೇಗೌಡ, ಎಇಇ ರವಿಕುಮಾರ್, ಎಇ ನರಸಿಂಹೇಗೌಡ, ಗ್ರಾಪಂ ಅಧ್ಯಕ್ಷೆ ಸುಶೀಲಮ್ಮ, ಸದಸ್ಯ ತಿಮ್ಮಪ್ಪ, ಜಯರಾಮಾಚಾರಿ, ಜೆಡಿಎಸ್ನ ರಂಗಪ್ಪ, ಎ.ಟಿ. ಸತೀಶ್ಗೌಡ, ಅನಂತರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

