ಮೈಸೂರು

ಮಕ್ಕಳಿಗಾಗಿ ವಿಶೇಷ ಗ್ರಾಮಸಭೆ ನಡೆಸಿ: ನ್ಯಾಯಾಧೀಶೆ ಬಿ.ಎಂ. ಶೈಲಾ ಸಲಹೆ

Published On :

ಹುಣಸೂರು: ಮಕ್ಕಳಿಗಾಗಿ ಪ್ರತಿ ಗ್ರಾಪಂನಲ್ಲೂ ವಿಶೇಷ ಗ್ರಾಮಸಭೆ ನಡೆಸಿ ಅವರ ಕುಂದು ಕೊರತೆಗಳನ್ನು ಆಲಿಸಿ ಸಮಸ್ಯೆ ಬಗೆಹರಿಸಬೇಕು. ಎಂದು ಹೆಚ್ಚುವರಿ ಹಿರಿಯ ಶ್ರೇಣಿ ನ್ಯಾಯಾಧೀಶೆ ಬಿ.ಎಂ. ಶೈಲಾ ಹೇಳಿದರು. ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಹಕ್ಕುಗಳು ಮತ್ತು ಕಾಯ್ದೆಗಳು ಹಾಗೂ ಸರ್ಕಾರಿ ಸೌಲಭ್ಯಗಳು ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು, ಮಕ್ಕಳು ಕಡ್ಡಾಯವಾಗಿ ಸಭೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳುವ ಜವಾಬ್ದಾರಿ ಗ್ರಾಪಂಗಳ ಮೇಲಿದೆ. ಮಕ್ಕಳ ಪ್ರತಿಭೆಗೆ ಹಣ ಮೀಸಲಿಡುವುದು ಭಿಕ್ಷೆಯಲ್ಲ. ಅದು ಅವರ ಹಕ್ಕು ಎಂದರು. ದೇಶದ ಜನಸಂಖ್ಯೆಯಲ್ಲಿ ಶೇ.43.79ರಷ್ಟು ಮಕ್ಕಳಿದ್ದಾರೆ. 18 ವರ್ಷದೊಳಗಿನವರನ್ನು ಮಕ್ಕಳೆಂದೆ ಪರಿಗಣಿಸಲಾಗಿದೆ. ಈ ಮಕ್ಕಳ ಮಾನವ ಹಕ್ಕುಗಳನ್ನು ಗುರುತಿಸಿ 1989ರಲ್ಲಿ ವಿಶ್ವಸಂಸ್ಥೆ ಮಂಡಿಸಿದ್ದ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ಸರ್ಕಾರ ಸಹಿ ಮಾಡಿ ಮಕ್ಕಳ ಎಲ್ಲಾ ಅವಶ್ಯಕತೆಗಳನ್ನು ಕಲ್ಪಿಸುವುದಕ್ಕೆ ಬದ್ಧವಾಗಿದೆ ಎಂದು ಹೇಳಿದರು. ವಕೀಲರಾದ ಶಿವಣ್ಣೇಗೌಡ, ಅನಂತಕುಮಾರ್, ಸಿಡಿಪಿಒ ಮಹಿಳಾ ಸಂರಕ್ಷಣಾಧಿಕಾರಿ ರಂಗಮಣಿ ಉಪನ್ಯಾಸ ನೀಡಿದರು. ಕಾಲೇಜು ಪ್ರಾಂಶುಪಾಲ ಜವರಯ್ಯ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.