ಮೈಸೂರು

ಸರ್ಕಾರಿ ನೌಕರರ ರಾಜ್ಯ ಸಮ್ಮೇಳನ: ಪೂರ್ವಭಾವಿ ಸಭೆ

Published On :

ಎಚ್.ಡಿ. ಕೋಟೆ: ಪಟ್ಟಣದ ತಾಪಂ ಸಭಾಂಗಣದಲ್ಲಿ ಭಾನುವಾರ ಶಾಸಕ ಎಸ್.ಚಿಕ್ಕಮಾದು ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಮಟ್ಟದ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯಿತು.
ಶಾಸಕ ಚಿಕ್ಕಮಾದು ಮಾತನಾಡಿ, ನೌಕರರ ಬೇಡಿಕೆಗಳನ್ನು ತಿಳಿಸುವುದಕ್ಕಾಗಿ ಆ.22 ರಂದು ಮೈಸೂರಿನಲ್ಲಿ ಈ ಸಮ್ಮೇಳನ ಹಮ್ಮಿಕೊಂಡಿದ್ದಾರೆ. ಸರ್ಕಾರ ನೌಕರರಿಗೆ ಎಷ್ಟರ ಮಟ್ಟಿಗೆ ಸ್ಪಂದಿಸುತ್ತದೆ ಎಂಬುವುದನ್ನು ಅರಿಯಬೇಕು. ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವುದು ಇದರ ಮುಖ್ಯ ಉದ್ದೇಶ. ಮುಖ್ಯಮಂತ್ರಿಗಳ ಜಿಲ್ಲೆಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ದೇಶ ಪ್ರಗತಿ ಹೊಂದಲು ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಇದರಲ್ಲಿ ಅನ್ಯೋನತೆ ಇಲ್ಲದಿದ್ದರೆ ಪ್ರಗತಿ ಸಂಪೂರ್ಣ ಕುಂಠಿತವಾಗುತ್ತದೆ. ಯಾವುದೆ ರಾಜಕಾರಣಿ ಸಹ ಅಧಿಕಾರಿಗಳ ದ್ವೇಷಿಯಲ್ಲ. ಎಲ್ಲರೂ ನಮಗೆ ಮಿತ್ರರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಗೌರವಿಸುತ್ತಾರೆ ಎಂದು ತಿಳಿಸಿದರು. ತಾಲೂಕು ನೌಕರರ ಸಂಘದ ಅಧ್ಯಕ್ಷ ಶ್ರೀಕಂಠಯ್ಯ, ಜಿಲ್ಲಾ ನೌಕರರ ಸಂಘದ ಖಜಾಂಚಿ ಚುಂಚೇಗೌಡ, ಜಿ.ಎಲ್.ಶಿವಣ್ಣ, ಆನಂದ್, ಲಕ್ಷ್ಮಿಕಾಂತ, ಕೆಂಪಣ್ಣ, ಶಿವಸ್ವಾಮಿ, ತಾಲೂಕು ಕಾರ್ಯದರ್ಶಿ ಬಸವರಾಜು, ಉಪಾಧ್ಯಕ್ಷ ಶಿವಣ್ಣ, ರವಿಚಂದ್ರ, ಕರಿಯಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.