ಮೈಸೂರು

ಕಾಂಗ್ರೆಸ್ ವಿರುದ್ಧ ಬೀದಿಗಿಳಿದ ಬಿಜೆಪಿ

Published On :

ಕ.ಪ್ರ.ವಾರ್ತೆ ್ಣ ಮೈಸೂರು ್ಣ ಜೂ.24
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ಮತ ಪಡೆದು, ಆ ವರ್ಗಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕರ್ತರು ಮಂಗಳವಾರ ಪ್ರತಿಭಟಿಸಿದರು.
ನಗರದ ರೈಲು ನಿಲ್ದಾಣದ ಬಳಿಯ ಬಾಬು ಜಗಜೀವನ್‌ರಾಮ್ ವೃತ್ತದಿಂದ ಮೆರವಣಿಗೆ ಹೊರಟ ನೂರಾರು ಕಾರ್ಯಕರ್ತರು ಜೆಎಲ್‌ಬಿ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ತಮ್ಮ ಮನವಿ ಸಲ್ಲಿಸಿದರು. ಸಿದ್ದರಾಮಯ್ಯ ಅವರು ಶಾದಿಭಾಗ್ಯ ಯೋಜನೆ ಮೂಲಕ ಕೇವಲ ಅಲ್ಪಸಂಖ್ಯಾತರ ಓಲೈಕೆ ಮಾಡಿ ಹಿಂದುಳಿದ ವರ್ಗದವರಿಗೆ ದ್ರೋಹ ಮಾಡಿದ್ದಾರೆ. ಬಸವ ವಸತಿ ಯೋಜನೆಯಡಿ ಜಿಲ್ಲೆಯ ಫಲಾನುಭವಿಗಳಿಗಾಗಿ 36,541 ಮನೆಗಳ ಅನುಮೋದನೆಯಾಗಿದೆ. ಇದರಲ್ಲಿ 13,100 ಮನೆಗಳ ಕಾಮಗಾರಿ ಮಾತ್ರ ಪೂರ್ಣಗೊಂಡಿದೆ. ಉಳಿದ 22 ಸಾವಿರ ಮನೆಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಯೋಜನೆಗೆ ಸರ್ಕಾರದಿಂದ ಸರಿಯಾಗಿ ಹಣ ಬಿಡುಗಡೆ ಆಗುತ್ತಿಲ್ಲ. ಆರ್‌ಟಿಇ ಅಡಿಯಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೊಳವೆ ಬಾವಿ ತೋಡಲು ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಸೂಕ್ತ ಸೌಲಭ್ಯ ಕಲ್ಪಿಸಿ: ಬಿಸಿಎಂ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳಿಗೆ ಸೂಕ್ತ ಮೂಲಸೌಲಭ್ಯ ಕಲ್ಪಿಸಬೇಕು. ಭಾಗ್ಯಲಕ್ಷ್ಮಿ ಯೋಜನೆ ಮುಂದುವರಿಸಿ, ಹಣ ಬಿಡುಗಡೆ ಮಾಡಬೇಕು. ಹಿಂದುಳಿದ ವರ್ಗಕ್ಕೆ ರಾಜ್ಯ ಸರ್ಕಾರವು ನೀಡಿರುವ ಸೌಲಭ್ಯಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.
ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಎಸ್.ಎ.ರಾಮದಾಸ್, ಬಿಜೆಪಿ ನಗರಾಧ್ಯಕ್ಷ ಇ.ಮಾರುತಿರಾವ್ ಪವಾರ್, ಜಿಲ್ಲಾಧ್ಯಕ್ಷ ಹೇಮಂತಕುಮಾರ್ ಗೌಡ, ಮ.ವಿ.ರಾಮಪ್ರಸಾದ್, ಎಂ.ಕೆ.ಶಂಕರ್, ಗಿರೀಶ್‌ಪ್ರಸಾದ್, ಬಿ.ವಿ. ಮಂಜುನಾಥ್, ಶಿವಕುಮಾರ್, ಸ್ನೇಕ್ ಶ್ಯಾಮ್, ಜಿಪಂ ಸದಸ್ಯ ಡಾ.ಶಿವರಾಮ್, ಮುಖಂಡರಾದ ಬಿ.ಪಿ.ಮಂಜುನಾಥ್, ನಂಜುಂಡಸ್ವಾಮಿ, ಶ್ರೀವತ್ಸ, ಸುರೇಶ್‌ಬಾಬು, ಮಲ್ಲಪ್ಪಗೌಡ, ಯಶಸ್ವಿ ಸೋಮಶೇಖರ್, ಸೋಮಸುಂದರ್, ಚಂದ್ರಶೇಖರ್, ಶಿವಕುಮಾರ್, ಜೋಗಿ ಮಂಜು, ರಾಜುಗೌಡ, ನಂಜಪ್ಪ, ಬ್ರಹ್ಮಾಚಾರ್, ಗಿರಿಧರ್, ಜಗದೀಶ್, ಜಯಪ್ರಕಾಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.