ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ
ಮೈಸೂರು; ಸರ್ಕಾರದ ವಿವಿಧ ಯೋಜನೆಗಳಡಿ ಬಡವರು ಮತ್ತು ನಿರಾಶ್ರಿತರಿಗೆ ಮನೆ ಕಲ್ಪಿಸಿಕೊಡುವಲ್ಲಿ ನಿರ್ಲಕ್ಷ್ಯ ವಹಿಸಿರುವ ನಗರಪಾಲಿಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ರಾಜ್ಯ ದ್ರಾವಿಡ ಮಹಾ ಸಭಾ (ಆರ್ಡಿಎಂಎಸ್) ಕಾರ್ಯಕರ್ತರು ಮಂಗಳವಾರ ಪ್ರತಿಭಟಿಸಿದರು.
ನಗರದ ಪುರಭವನದಿಂದ ಮೆರವಣಿಗೆ ಹೊರಟ ನೂರಾರು ಕಾರ್ಯಕರ್ತರು, ಗಾಂಧಿಚೌಕ, ಚಿಕ್ಕಗಡಿಯಾರ ವೃತ್ತ, ದೇವರಾಜ ಅರಸು ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಬೃಹತ್ ಪೆಂಡಾಲ್ ಅಡಿಯಲ್ಲಿ ಪ್ರತಿಭಟನೆ ಆರಂಭಿಸಿದರು.
ಬಡವರಿಗೆ ಮನೆ ನಿರ್ಮಿಸಿಕೊಡಲು ರಾಜ್ಯ ಸರ್ಕಾರ ಹಲವಾರು ಯೋಜನೆ ಜಾರಿಗೊಳಿಸಿದ್ದರೂ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಅಂಬೇಡ್ಕರ್ ವಸತಿ ಯೋಜನೆ, ಆಶ್ರಯ ಯೋಜನೆ, ಕೃಷ್ಣ ಕುಟೀರ ಯೋಜನೆ, ಬಸವ ಯೋಜನೆ, ಇಂದಿರಾ ಆವಾಸ್ ಯೋಜನೆ, ವಾಜಪೇಯಿ ಯೋಜನೆ, ಜನತಾ ಮನೆ ಯೋಜನೆ, ರಾಜೀವ್ ಆವಾಸ್ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿವೆ. ಆದರೆ, ಇದು ಬಡವರಿಗೆ ತಲುಪುತ್ತಿಲ್ಲ ಎಂದು ಕಿಡಿಕಾರಿದರು.
ಆರ್ಡಿಎಂಎಸ್ ರಾಜ್ಯಾಧ್ಯಕ್ಷ ಅಶೋಕಪುರಂ ಶ್ರೀನಿವಾಸ್, ಉಪಾಧ್ಯಕ್ಷ ವಿನಾಯಕ, ಕಾರ್ಯದರ್ಶಿ ಗಾಂಧಿನಗರ ಶಾಂತಿ, ಜಿಲ್ಲಾಧ್ಯಕ್ಷ ಕುಮಾರಸ್ವಾಮಿ, ಮುಖಂಡರಾದ ಸೈಯದ್ ಸಲೀಂ, ಲೋಕೇಶ್, ಮೊಹಮ್ಮದ್ ಜಾಫರ್, ಸರ್ದಾರ್ ಅಹಮ್ಮದ್, ಚೆನ್ನಗಿರಿ, ಆಶಾ, ಸುಮಾ, ಗಂಗಮ್ಮ, ರೇವತಿ, ಅನುಪಮಾ, ಯಾಸ್ಮಿನ್, ಸುನಂದಾ, ಭಾಗ್ಯಮ್ಮ, ಪಾರ್ವತಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

