ಮೈಸೂರು

ವಿದ್ಯುತ್ ಶಾರ್ಟ್ ಸರ್ಕಿಟ್: ಅಂಗಡಿಯಲ್ಲಿ ಬೆಂಕಿ

Published On :

ಮೈಸೂರು: ವಿದ್ಯುತ್ ಸಾರ್ಟ್ ಸರ್ಕ್ಯೂಟ್‌ನಿಂದ ಮಳಿಗೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರು. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ನಗರದ ಲ್ಯಾನ್ಸ್‌ಡೌನ್ ಹಿಂಭಾಗದಲ್ಲಿರುವ ಹಳೇ ಸಂತೆಪೇಟೆಯ ಮಮತಾ ಜನರಲ್ ಸ್ಟೋರ್ಸ್‌ನಲ್ಲಿ ವಿದ್ಯುತ್ ಸಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಮಾಲೀಕ ಲಾದರಾಮ್ ಎಂದಿನಂತೆ ಬೆಳಗ್ಗೆ ವ್ಯಾಪಾರದಲ್ಲಿ ತೊಡಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಈ ಸಂಬಂಧ ದೇವರಾಜ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.