ಸಾಗುವಳಿದಾರರ ಒಕ್ಕಲೆಬ್ಬಿಸುವಿಕೆಗೆ ಖಂಡನೆ
ಮೈಸೂರು: ಯಾದಗಿರಿ ಜಿಲ್ಲೆ ಕಮಲಾನಗರ ಕ್ಯಾಂಪ್ನ ನಾಲ್ಕು ತಾಂಡಾಗಳಿಗೆ ಸೇರಿದ ಮತ್ತು ಶಿವಮೊಗ್ಗ ಜಿಲ್ಲೆಯ ಆನಂದಪುರಂ ಹತ್ತಿರದ ಕರಡಿಬೆಟ್ಟದ ವ್ಯಾಪ್ತಿಯಲ್ಲಿ 20 ವರ್ಷಗಳಿಂದ ಬಗರ್ಹುಕುಂ ಸಾಗುವಳಿ ಮಾಡುತ್ತಿರುವ ರೈತರನ್ನು ಅರಣ್ಯ ಇಲಾಖೆಯವರು ಒಕ್ಕಲೆಬ್ಬಿಸಿರುವ ಘಟನೆಯನ್ನು ರೈತ- ಕೃಷಿ ಕಾರ್ಮಿಕ ಸಂಘಟನೆ ತೀವ್ರವಾಗಿ ಖಂಡಿಸಿದೆ. ಈಗಾಗಲೇ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರವು ಕಂದಾಯ, ಅರಣ್ಯ ಹಾಗೂ ಭೂಮಾಪನ ಇಲಾಖೆಗಳ ಉನ್ನತ ಅಧಿಕಾರಿಗಳ ಜಂಟಿ ಸಮಿತಿಯನ್ನು ರಾಜ್ಯ, ವಿಭಾಗೀಯ ಹಾಗೂ ಜಿಲ್ಲಾ ಮಟ್ಟದಲ್ಲೂ ರಚಿಸಿ ಈ ಎಲ್ಲಾ ಇಲಾಖೆಗಳು ಜಂಟಿಯಾಗಿ ರಾಜ್ಯಾದ್ಯಂತ ಅರಣ್ಯ ಮತ್ತು ಕಂದಾಯ ಭೂಮಿಯ ಸರ್ವೇ ಮಾಡಿ ತಿಂಗಳಿಗೊಮ್ಮೆ ಸಭೆ ನಡೆಸಿ 6 ತಿಂಗಳೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಆಜ್ಞಾಪಿಸಿದೆ. ಆದರೆ ಸಮಿತಿ ಸರ್ವೆ ನಡೆಸಿ ವರದಿ ಸಲ್ಲಿಸುವ ಮುನ್ನವೇ ಅರಣ್ಯ ಇಲಾಖೆಯವರು ದೌರ್ಜನ್ಯ ನಡೆಸಿದ್ದಾರೆ. ಇದೇ ವೇಳೆ ಇಲಾಖೆ ಸಿಬ್ಬಂದಿಯನ್ನು ಧೈರ್ಯವಾಗಿ ಹಿಮ್ಮೆಟ್ಟಿಸಿರುವ ರೈತರನ್ನು ಅಭಿನಂದಿಸುವುದಾಗಿ ಆರ್ಕೆಎಸ್ ಜಿಲ್ಲಾ ಸಮಿತಿ ಸಂಚಾಲಕ ಎಂ. ಶಶಿಧರ್ ಅಭಿನಂದಿಸಿದ್ದಾರೆ.
ವರ್ತಕರ ಮಹಾಸಭೆ ಇಂದು
ಎಚ್.ಡಿ. ಕೋಟೆ: ಪಟ್ಟಣದ ವರ್ತಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜೂ. 27ರ ಮಧ್ಯಾಹ್ನ 3ಕ್ಕೆ ಪಟ್ಟಣದ 2ನೇ ಮುಖ್ಯ ರಸ್ತೆಯ ಅಪ್ಪಾಜಿಗೌಡರ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಆದ್ದರಿಂದ ಪಟ್ಟಣದ ಎಲ್ಲಾ ವರ್ತಕರು, ನಿಗದಿತ ವೇಳೆಗೆ ಸಭೆಗೆ ಕಡ್ಡಾಯ ಹಾಜರಾಗುವಂತೆ ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

