ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನ ಸಂಚಾರಕ್ಕೆ ನಿರ್ಬಂಧ
ಮೈಸೂರು: ಚಾಮುಂಡಿಬೆಟ್ಟದಲ್ಲಿ ಜು.4, 11, 18 ಮತ್ತು 25 ರಂದು ಆಷಾಢ ಶುಕ್ರವಾರ ಹಾಗೂ ಜು.18 ರಂದು ಚಾಮುಂಡೇಶ್ವರಿ ವರ್ಧಂತಿ ನಡೆಯಲಿದ್ದು, ಈ ದಿನಾಂಕಗಳಲ್ಲಿ ಚಾಮುಂಡಿಬೆಟ್ಟಕ್ಕೆ ಕೆಎಸ್ಆರ್ಟಿಸಿ ಬಸ್ ಹೊರತುಪಡಿಸಿ ಎಲ್ಲ ಸರ್ಕಾರಿ ಹಾಗೂ ಖಾಸಗಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಸಾರ್ವಜನಿಕರ ಹಿತದೃಷ್ಟಿ, ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಸುಗಮ ದರ್ಶನ ವ್ಯವಸ್ಥೆ ಮತ್ತು ವಾಹನ ನಿಲುಗಡೆ ತೊಂದರೆ ನಿವಾರಿಸಲು ಈ ದಿನಗಳಂದು ಚಾಮುಂಡಿಬೆಟ್ಟದ ತಾವರೆಕಟ್ಟೆಯಿಂದ, ನಂದಿ ಮಾರ್ಗದ ರಸ್ತೆಯಿಂದ, ಉತ್ತನಹಳ್ಳಿ ರಸ್ತೆ ಕಡೆಯಿಂದ ಮತ್ತು ಇಂಡಸ್ ವ್ಯಾಲಿ ರಸ್ತೆ ಮೂಲಕ ಚಾಮುಂಡಿಬೆಟ್ಟಕ್ಕೆ ಹೋಗುವ ಕೆಎಸ್ಆರ್ಟಿಸಿ ಬಸ್ಗಳನ್ನು ಹೊರತುಪಡಿಸಿ ಎಲ್ಲ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ತಿಳಿಸಿದ್ದಾರೆ. ಕುರುಬಾರಳ್ಳಿ ವೃತ್ತದಿಂದ ಚಾಮುಂಡಿಬೆಟ್ಟದ ರಸ್ತೆಯಲ್ಲಿ ಸಾಗಿ ಕೆ.ಸಿ.ಲೇಔಟ್ ಮುಖ್ಯರಸ್ತೆಗೆ ಪೂರ್ವಕ್ಕೆ ತಿರುಗಿ ಹೆಲಿಪ್ಯಾಡ್ ರಸ್ತೆ ತಲುಪಿ ಲಲಿತಮಹಲ್ ಹೆಲಿಪ್ಯಾಡ್ನ ಬಳಿಯ ಖಾಲಿ ಸ್ಥಳದಲ್ಲಿ ಸ್ಥಳೀಯ ಪೊಲೀಸರು ನೀಡುವ ಸೂಚನೆ ಅನುಸಾರ ಕ್ರಮ ಬದ್ಧವಾಗಿ ಭಕ್ತಾದಿಗಳು ತಮ್ಮ ವಾಹನ ನಿಲುಗಡೆ ಮಾಡಬೇಕು. ಭಕ್ತರು ವಾಹನಗಳನ್ನು ನಿಲುಗಡೆ ಮಾಡಿದ ಸ್ಥಳದಿಂದ ಚಾಮುಂಡಿಬೆಟ್ಟಕ್ಕೆ ಕೆಎಸ್ಆರ್ಟಿಸಿ ನಗರ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸಬೇಕು. ಜತೆಗೆ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಹೆಲಿಪ್ಯಾಡ್ಗೆ ವಾಪಸ್ ಆಗಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

