ಮೈಸೂರು

ಸೌಲತ್ತನ್ನು ಅರ್ಹರ ಮನೆಗೆ ತಲುಪಿಸಿ

Published On :

ಕೆ.ಆರ್. ನಗರ: ಸರ್ಕಾರದಿಂದ ದೊರೆಯುವ ಸೌಲತ್ತುಗಳನ್ನು ಅರ್ಹರ ಮನೆ ಬಾಗಿಲಿಗೆ ತಲುಪಿಸುವುದರ ಜತೆಗೆ ಸದುಪಯೋಗವಾಗುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.
ತಾಪಂ ಸಭಾಂಗಣದಲ್ಲಿ ಜಿಪಂ ಅಭಿವೃದ್ಧಿ ಅನುದಾನದಲ್ಲಿ ಕ್ರೀಡಾಪಟುಗಳಿಗೆ ಉಚಿತ ಶೂ ಮತ್ತು ಪ್ರೌಢಶಾಲಾ ಬಾಲಕಿಯರಿಗೆ ನ್ಯಾಪ್‌ಕಿನ್ ವಿತರಿಸಿ ಮಾತನಾಡಿದ ಅವರು, ಸೌಲತ್ತುಗಳು ದುರ್ಬಳಕೆಯಾದರೆ ಅಭಿವೃದ್ಧಿ ಅಸಾಧ್ಯ ಎಂದು ತಿಳಿಸಿದರು. ವಿದ್ಯಾರ್ಥಿಗಳು ಸರ್ಕಾರದಿಂದ ದೊರೆಯುವ ವಿವಿಧ ಅನುಕೂಲತೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡಬೇಕೆಂದು ಕಿವಿಮಾತು ಹೇಳಿದ ಅವರು, ಸರ್ಕಾರದ ಸವಲತ್ತುಗಳನ್ನು ಪಡೆಯಲು ಅರ್ಹರಾದವರು ಸಕಾಲದಲ್ಲಿ ಅರ್ಜಿ ಸಲ್ಲಿಸಿ ತಮ್ಮ ಪಾಲಿನ ಸೌಲತ್ತನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ವಿದ್ಯಾರ್ಥಿ ದಿಸೆಯಲ್ಲಿ ಶೈಕ್ಷಣಿಕ ಮತ್ತು ಕ್ರೀಡಾ ಚಟುವಟಿಕೆಗಳತ್ತ ಹೆಚ್ಚು ಗಮನ ಹರಿಸಿ ಉನ್ನತ ಸಾಧನೆ ಮಾಡಿ ಎಂದು ಹೇಳಿದರು. ಇದೇ ವೇಳೆ 215 ವಿದ್ಯಾರ್ಥಿಗಳಿಗೆ ಶೂ, 34 ಮಂದಿ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ನ್ಯಾಪ್‌ಕಿನ್, ಹತ್ತು ಮಂದಿ ಅಂಗವಿಕಲರಿಗೆ ಟ್ರೈಸಿಕಲ್, 11 ಮಂದಿಗೆ ಅಂಧರ ಬಿಳಿಕೋಲು ವಿತರಿಸಲಾಯಿತು.
ಜಿಪಂ ಅಧ್ಯಕ್ಷ ಸಿ.ಜೆ.ದ್ವಾರಕೀಶ್, ಸದಸ್ಯೆ ಕಲ್ಪನಾ ಧನಂಜಯ, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ, ಸದಸ್ಯರಾದ ಹೇಮಾವತಿ ಅಶೋಕ್, ನಾಗಣ್ಣ, ಸಾದಿಕ್‌ಖಾನ್, ಕೃಷ್ಣೇಗೌಡ, ಪುರಸಭಾ ಸದಸ್ಯ ಎನ್.ಶಿವಕುಮಾರ್, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ.ಸೋಮಶೇಖರ್, ಎಪಿಎಂಸಿ ನಿರ್ದೇಶಕ ಬಂಡಹಳ್ಳಿ ಕುಚೇಲ, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ತಾಪಂ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ಸಿದ್ದಲಿಂಗಮೂರ್ತಿ, ಕ್ಷೇತ್ರ ಸಮನ್ವಯಾಧಿಕಾರಿ ಡಾ.ಬಿ.ಸಿ. ದೊಡ್ಡೇಗೌಡ, ಸಮಾಜ ಸೇವಕ ಕೆ.ಎಲ್. ಹೇಮಂತ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.