ಮೈಸೂರು

ಅಭಿವೃದ್ಧಿಗೆ ರಾಜಕಾರಣಿ ಪಾತ್ರವೂ ಮುಖ್ಯ

Published On :

ಮೈಸೂರು: ದೇಶದ ಅಭಿವೃದ್ಧಿಗೆ ಉತ್ತಮ ರಾಜಕಾರಣಿಯ ಪಾತ್ರ ಬಹುಮುಖ್ಯ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್ ಹೇಳಿದರು.
ಕುವೆಂಪುನಗರದ ಶಾಂತಿ ಸಾಗರ್ ಕಾಂಪ್ಲೆಕ್ಸ್‌ನಲ್ಲಿ ಭಾನುವಾರ ಹೊಟೇಲ್ ಸುವರ್ಣ ಭವನವು ರೋಟರಿ ಮೈಸೂರು ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಪೋಷಕರು ಹೆಚ್ಚಾಗಿ ತಮ್ಮ ಮಕ್ಕಳು ವೈದ್ಯರು, ಎಂಜಿನಿಯರ್‌ಗಳು, ಐಎಎಸ್ ಅಧಿಕಾರಿಗಳಾಗಬೇಕೆಂದು ಬಯಸುತ್ತಾರೆ. ಆದರೆ ಯಾರು ಸಹ ರಾಜಕಾರಣಿಗಳಾಗಬೇಕೆಂದು ಬಯಸುವುದಿಲ್ಲ. ಉತ್ತಮ ರಾಜಕಾರಣಿಗಳಿಂದ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ. ಆದ್ದರಿಂದ ಪೋಷಕರು ರಾಜಕಾರಣ ಪ್ರವೇಶಕ್ಕೆ ತಮ್ಮ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕೆಂದು ಹೇಳಿದರು.
ರಾಜಕಾರಣಿಗಳೆಲ್ಲರೂ ಭ್ರಷ್ಟಾಚಾರಿಗಳಲ್ಲ ಅಥವಾ ಕೆಟ್ಟವರೂ ಅಲ್ಲ. ಎಲ್ಲೋ ಕೆಲವರು ಮಾಡಿರುವ ಕೃತ್ಯದಿಂದ ಇಡಿ ಸಮೂಹವನ್ನು ಸಮಾಜ ಅನುಮಾನದಿಂದ ನೋಡುವಂತಾಗಿದೆ. ಈ ದಿಸೆಯಲ್ಲಿ ಉತ್ತಮ ರಾಜಕಾರಣಿಗಳನ್ನು ರೂಪಿಸುವಲ್ಲಿ ಸಮಾಜದ ಪಾತ್ರ ಬಹು ಮುಖ್ಯ ಎದು ಅವರು ತಿಳಿಸಿದರು.   
ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಡಾ. ಭಾನುಪ್ರಕಾಶ್ ಶರ್ಮ ಉದ್ಘಾಟಿಸಿದರು.
ಮಹಾರಾಜ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಡಾ. ಭಾಷ್ಯಂ ಸ್ವಾಮಿ ಮಾತನಾಡಿದರು. ಶ್ರೀರಂಗ ಹಾಸ್ಪಿಟಾಲಿಟಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ನಗರ ಪಾಲಿಕೆ ಸದಸ್ಯ ಕೆ.ವಿ. ಮಲ್ಲೇಶ್ ಹಾಗೂ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಬಿ.ಆರ್. ನಟರಾಜ್ ಜೋಯಿಸ್ ಮುಖ್ಯ ಅತಿಥಿಗಳಾಗಿದ್ದರು.
ಸುವರ್ಣ ಭವನದ ನಿರ್ದೇಶಕ ಟಿ.ಎಸ್. ದೀಪಕ್, ವ್ಯವಸ್ಥಾಪಕ ನಿರ್ದೇಶಕ ಟಿ.ಎಸ್ ಪ್ರದೀಪ್ ಇದ್ದರು. ಶಿಬಿರದಲ್ಲಿ 50ಕ್ಕೂ ಹೆಚ್ಚಿನ ಮಂದಿ ರಕ್ತದಾನ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.