ಒಂಟಿಕೊಪ್ಪಲ್ ದೇಗುಲ ಉದ್ಘಾಟನೆ
ಮೈಸೂರು: ಒಂಟಿಕೊಪ್ಪಲಿನ ಕಾಳಿದಾಸ ರಸ್ತೆಯಲ್ಲಿರುವ ಗಣಪತಿ ಹಾಗೂ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ನವೀಕರಣದ ಉದ್ಘಾಟನೆ ಕಾರ್ಯಕ್ರಮ ಸೋಮವಾರ ನಡೆಯಿತು. ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿಯು ರಾಮಮಂದಿರದ ಕಲ್ಯಾಣ ಮಂದಿರದ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗಣಪತಿ ಮತ್ತು ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ನವೀಕರಣದ ಉದ್ಘಾಟನೆಯನ್ನು ಆದಿಚುಂಚನಗಿರಿ ಶಾಖಾ ಮಠದ ಸೋಮನಾಥ ಸ್ವಾಮೀಜಿ ನೆರೆವೇರಿಸಿದರು. ಚಾಮರಾಜ ಕ್ಷೇತ್ರದ ಶಾಸಕ ವಾಸು, ನಗರ ಪಾಲಿಕೆ ಸದಸ್ಯ ಸಿ. ಮಹದೇಶ್, ಸೆನೆಟ್ ಮಾಜಿ ಸದಸ್ಯ ಎಸ್. ಜಯಪ್ರಕಾಶ್ ಹಾಗೂ ಸಮಿತಿಯ ಪದಾಧಿಕಾರಿಗಳಿದ್ದರು. ಇದಕ್ಕೂ ಮುನ್ನ ನವೀಕರಣಗೊಂಡಿರುವ ಆಲಯದಲ್ಲಿ ಪ್ರತಿಷ್ಠಾಪಿಸಿರುವ ಗಣಪತಿ ಹಾಗೂ ಸುಬ್ರಹ್ಮಣ್ಯಸ್ವಾಮಿ ವಿಗ್ರಹಗಳಿಗೆ ಅಭಿಷೇಕ, ವಿಶೇಷ ಪೂಜೆ ಮತ್ತಿತರ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ಅಂಬಿ ಆರೋಗ್ಯಕ್ಕೆ ಪ್ರಾರ್ಥನೆ
ಮೈಸೂರು: ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಕರ್ನಾಟಕ ಸೇನಾ ಪಡೆಯವರು ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಈಡುಗಾಯಿ ಹೊಡೆದರು. ಕಸಾಪ ಜಿಲ್ಲಾಧ್ಯಕ್ಷ ಎಂ. ಚಂದ್ರಶೇಖರ್, ಕರ್ನಾಟಕ ಸೇನಾ ಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ಗೌಡ, ಮುಖಂಡರಾದ ಮನಮೋಹನ್, ಪ್ರಭು, ಜಯಪ್ರಕಾಶ್ಗೌಡ, ಪ್ರಜೀಶ್, ಕೃಷ್ಣ, ನಂಜುಂಡಸ್ವಾಮಿ, ಗುರುಶಂಕರ್, ಸ್ವಾಮಿ, ದೀಪಕ್, ಶಾಂತಕುಮಾರ್, ವಿಜಿ, ರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

