ಕೃಷಿ ಉತ್ಸವಕ್ಕೆ ಗ್ರಾಮೀಣರ ಮೆರುಗು
ಹುಣಸೂರು: ರೈತರು ಕೃಷಿಯಲ್ಲಿ ಹೊಸ ಅವಿಷ್ಕಾರಗಳ ಬಗ್ಗೆ ಚಿಂತಿಸಿ ಹೆಜ್ಜೆ ಹಾಕಬೇಕು. ಆರ್ಥಿಕವಾಗಿ ಸಬಲರಾಗಲು ಸರ್ಕಾರದ ಯೋಜನೆಗಳ ಅರಿವು ಪಡೆದುಕೊಂಡು ಆಧುನಿಕ ಕೃಷಿಯನ್ನು ಅಳವಡಿಸಿಕೊಳ್ಳಬೇಕೆಂದು ಶಾಸಕ ಎಚ್.ಪಿ.ಮಂಜುನಾಥ್ ಕರೆ ನೀಡಿದರು.
ಪಟ್ಟಣದ ಮುನೇಶ್ವರ ಮೈದಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೋಟರಿ ಸಂಸ್ಥೆ ಮತ್ತಿತರ ಸಂಘಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ನಡೆದ ಕೃಷಿ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ಬೆನ್ನಲುಬು ರೈತಾಪಿ ವರ್ಗ. ಸರ್ಕಾರ ನಾನಾ ಯೋಜನೆಗಳನ್ನು ಜಾರಿಗೆ ತಂದು ರೈತರಿಗೆ ಅರಿವು ಮೂಡಿಸಲು ಆಹ್ವಾನ ನೀಡಿದರೆ ಯಾರೂ ಬರಲ್ಲ. ಈಗ ಧರ್ಮಸ್ಥಳ ಸಂಸ್ಥೆ ಮಾಡುವ ಕೃಷಿ ಉತ್ಸವ ಸಭೆಗೆ ಸಹಸ್ರಾರು ಮಂದಿ ಭಾಗವಹಿಸಿರುವುದು ಖುಷಿ ತಂದಿದೆ ಎಂದರು.
ರೈತರು ಭೂಮಿಗೆ ಕ್ರಿಮಿನಾಶಕ ಮತ್ತು ರಾಸಾಯನಿಕ ಗೊಬ್ಬರಗಳನ್ನು ಹಾಕಿ, ವಿಷ ಉಣ್ಣಿಸುವ ಬದಲು ರಾಸಾಯನಿಕ ಮುಕ್ತ ರಾಜ್ಯವನ್ನಾಗಿಸಿ ಸಾವಯವ ಗೊಬ್ಬರವನ್ನು ಬಳಕೆ ಮಾಡಿ ಭೂಮಿ ಮತ್ತು ಜಲವನ್ನು ಉಳಿಸಬೇಕಾಗಿದೆ ಎಂದರು.
ಧರ್ಮಸ್ಥಳ ಸಂಸ್ಥೆ ಮಹಿಳೆಯರ ಸಬಲೀಕರಣ, ಗ್ರಾಮಾಭಿವೃದ್ಧಿಯನ್ನು ಕೈಗೆತ್ತಿಕೊಂಡರೆ, ಸರ್ಕಾರ ಕಳೆದ 13 ವರ್ಷದ ಹಿಂದೆ ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಲಾಗಿತ್ತು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೋಟಿಗಟ್ಟಲೆ ಅನುದಾನ ನೀಡುತ್ತಿದ್ದರೂ ಜನತೆ ಬಳೆಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಸಂಸ್ಥೆ ಅರಿವು ಮೂಡಿಸಿ ಅಭಿವೃದ್ಧಿಯತ್ತ ಹೆಜ್ಜೆ ಹಾಕುತ್ತಿರುವ ಕೆಲಸಕ್ಕೆ ತಾವು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ತಾಲೂಕಿನ ನೀರಾವರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು 200 ಕೋಟಿ ಅನುದಾನ, ಮಹಿಳೆಯರ ಸಬಲೀಕರಣಕ್ಕಾಗಿ ಲಕ್ಷಾಂತರ ರು. ವ್ಯಯಿಸಲಾಗುತ್ತಿದೆ. ಅದೇ ರೀತಿ ಹುಣಸೂರು ತಾಲೂಕನ್ನು ಮಾದರಿಯನ್ನಾಗಿ ಮಾಡಲು ಮಾ. 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 350ರಿಂದ 400 ಕೋಟಿ ವೆಚ್ಚಗಳ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ತಾಪಂ ಅಧ್ಯಕ್ಷೆ ದೇವಕಿ ತಿಮ್ಮನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಸದಸ್ಯ ಸಿ.ಟಿ.ರಾಜಣ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಮಹಾಬಲಕುಲಾಲ್, ಜಿಪಂ ಸದಸ್ಯರಾದ ರಮೇಶ್, ದೇವರಾಜು, ಡಾ. ಪುಷ್ಪಾಅಮರನಾಥ್, ಕೆ.ಎಂ. ಮಂಜು, ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಕೃಷಿ ಉತ್ಸವ ಸಮಿತಿ ಕಾರ್ಯದರ್ಶಿ ಸುನೀತಾ ಜೈರಾಮೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಎಚ್.ಎನ್. ಮಂಜುನಾಥ್, ಎಪಿಎಂಸಿ ಅಧ್ಯಕ್ಷ ಈರಣ್ಣ, ಪುರಸಭೆ ಸದಸ್ಯರಾದ ಶರವಣ, ಕೃಷ್ಣಗುಪ್ತರಾಜ್, ಎಚ್.ಪಿ. ಸತೀಶ್ ಕುಮಾರ್, ಯೋಗೇಂದ್ರಕುಮಾರ್, ಎಚ್.ವೈ. ಮಹದೇವ್, ಮುಖಂಡರಾದ ಹಂದನಹಳ್ಳಿ ಸೋಮಶೇಖರ್ ಇದ್ದರು. ಎಸ್. ಜಯರಾಮು ಸ್ವಾಗತಿಸಿದರು. ನಾರಾಯಣ್ ರೈ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

