ಮೈಸೂರು

ಕಾಂಗ್ರೆಸ್ಸಲ್ಲಿ ವೀರಶೈವರಿಗೂ ಗೌರವವಿದೆ: ವಿಶ್ವನಾಥ್

Published On :

ಮೈಸೂರು: ಕಾಂಗ್ರೆಸ್‌ನಲ್ಲಿ ವೀರಶೈವರಿಗೂ ಗೌರವವಿದೆ ಎಂದು ಸಂಸದ ಎಚ್. ವಿಶ್ವನಾಥ್ ಹೇಳಿದರು. ಪಕ್ಷದ ವೀರಶೈವ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್‌ನಿಂದ ಎಸ್. ನಿಜಲಿಂಗಪ್ಪ, ಬಿ.ಡಿ. ಜತ್ತಿ, ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಗಳಾಗಿದ್ದಾರೆ. ಎಂ. ರಾಜಶೇಖರಮೂರ್ತಿ ಅವರಿಗೂ ಕಾಂಗ್ರೆಸ್‌ನಲ್ಲಿ ಮಹತ್ವದ ಸ್ಥಾನ ಇತ್ತು. ಮುಂದೆ ಕೂಡ ವೀರಶೈವರಿಗೆ ಹೆಚ್ಚಿನ ಆದ್ಯತೆ ಸಿಗಲಿದೆ ಎಂದರು. ಜೆಎಸ್‌ಎಸ್ ಕಾಲೇಜಿನಿಂದಲೇ ನನ್ನ ರಾಜಕೀಯ ಆರಂಭವಾಯಿತು. ನಾನು ವೀರಶೈವರು, ಒಕ್ಕಲಿಗರು ಸೇರಿದಂತೆ ಎಲ್ಲ ವರ್ಗದವರ ಜೊತೆ ಉತ್ತಮ ಸಂಬಂಧ ಹೊಂದಿದ್ದೇನೆ. ಜಾತ್ಯತೀತವಾಗಿ, ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದರು. ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬಾರದು. ಎಚ್.ಡಿ. ದೇವೇಗೌಡರು ಪ್ರಧಾನಿಯಾದಾಗ ವಿಧಾನಸೌಧದಲ್ಲಿ ಸಿಹಿ ಹಂಚಿ ಸಂತಸ ಪಟ್ಟಿದ್ದೇನೆ ಎಂದರು. ಮಾಜಿ ಶಾಸಕ ಎಚ್.ಸಿ. ಬಸವರಾಜು, ಮಾಜಿ ಮೇಯರ್ ದಕ್ಷಿಣಾಮೂರ್ತಿ, ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್. ಚನ್ನಬಸಪ್ಪ,  ಮುಖಂಡರಾದ ಮಲ್ಲೇಶ್, ಜಾವಗಲ್ ಮಂಜುನಾಥ್, ಚಂದ್ರಮೌಳಿ, ಎಸ್.ಪಿ. ಮಂಜು,  ಬ್ಯಾಂಕ್ ಮಂಜು ಇತರರಿದ್ದರು.

ಗ್ಯಾಸ್ ಸಿಲಿಂಡರ್ ಸ್ಫೋಟ: ಗಾಯಾಳುಗಳಿಗೆ ಪರಿಹಾರ ನೀಡಿ
ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿರುವ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯವರು (ಸ್ವಾಭಿಮಾನಿ ಬಣ) ಲೋಟಸ್ ಇಂಡೇನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್ ಎದುರು ಪ್ರತಿಭಟಿಸಿದರು. ಮೈಸೂರು ತಾಲೂಕಿನ ಶ್ಯಾದನಹಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಲಕ್ಷ್ಮಣ ಮತ್ತು ಕುಟುಂಬದವರು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಲೋಟಸ್ ಇಂಡೇನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್‌ನವರಿಗೆ ಮಾಹಿತಿ ನೀಡಿದರೂ ಸ್ಪಂದಿಸಿಲ್ಲ. ಹೀಗಾಗಿ ಈ ವಿಚಾರದಲ್ಲಿ ಸಂಬಂಧಪಟ್ಟವರು ಸೂಕ್ತ ಕ್ರಮ ವಹಿಸಿ, ಗಾಯಾಳುಗಳಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಕರವೇ ಜಿಲ್ಲಾಧ್ಯಕ್ಷ ಹೊನ್ನೇಗೌಡ, ಮುಖಂಡರಾದ ಎಂ. ಶಿವಪ್ಪ, ಪ್ರಮೋದ್, ತಮ್ಮಯ್ಯ, ರವಿ, ರಾಜೇಶ್, ಚಂದ್ರ, ಶಿವು, ಕುಮಾರ್, ವೆಂಕಟೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.