ಕ್ರೈಸ್ತ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ
ಪಾಂಡವಪುರ: ಪಟ್ಟಣದ ಸ್ವರ್ಗಾರೋಹಣ ಮಾತೆ ದೇವಾಲಯ(ಚರ್ಚ್)ನ ಕ್ರೈಸ್ತ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮಾನವ ಧರ್ಮ ಶ್ರೇಷ್ಠ ಧರ್ಮ. ಇದನ್ನು ಪರಿಪೂರ್ಣವಾಗಿ ಪರಿಶುದ್ಧಗುಣಗಳಿಂದ ಅಳವಡಿಸಿಕೊಂಡು ತಮ್ಮ ಜೀವನ ಮೌಲ್ಯವನ್ನು ಎತ್ತಿಹಿಡಿಯುವ ಮೂಲಕ ಉತ್ತಮ ಪ್ರಜೆಯಾಗಿ ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಜನರು ತೆರಿಗೆ ರೂಪುದಲ್ಲಿ ಕೊಟ್ಟಿರುವ ಹಣವನ್ನೇ ಸರ್ಕಾರ ಅನುದಾನದ ಮೂಲಕ ಬಿಡುಗಡೆ ಮಾಡಲಾಗಿದೆ. ಕ್ರೈಸ್ತ ಸಮುದಾಯ ಭವನ ನಿರ್ಮಾಣಕ್ಕೆ ಬೇಕಾಗುವ ಹಣವನ್ನು 2 ಹಂತದಲ್ಲಿ ಸರ್ಕಾರದಿಂದ ಬಿಡುಗಡೆ ಮಾಡಿಸಿಕೊಡುವುದುದಾಗಿ ಶಾಸಕರು ಭರವಸೆ ನೀಡಿದರು. ಮೈಸೂರು ಧರ್ಮ ಪ್ರಾಂತ್ಯದ ಕ್ರೈಸ್ತ ಧರ್ಮಾಧ್ಯಕ್ಷ ಬಿಷಪ್ ಡಾ. ಥಾಮಸ್ ಅಂತೋನಿವಾಳಪಳ್ಳಿ ಮಾತನಾಡಿ, ಪ್ರತಿಯೊಬ್ಬರು ತಮ್ಮ ಜೀವನ ನಡೆಸಲು ಮಾಡುವಂತಹ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ದೇವರು ಮೆಚ್ಚುವ ಹಾಗೆ ಕೆಲಸ ಮಾಡಬೇಕು ಎಂದು ಹೇಳಿದರು. ಪಪಂ ಅಧ್ಯಕ್ಷ ಡಿ. ಶ್ರೀನಿವಾಸ್, ಕೆ.ಆರ್.ಪೇಟೆ ಚರ್ಚ್ ಧರ್ಮಗುರು ಫಾದರ್ ಮೈಕಲ್, ರಾಬರ್ಟ್ ಹಾಜರಿದ್ದರು.
ವಿಜ್ಞಾನ ವಸ್ತು ಪ್ರದರ್ಶನ
ಮಳವಳ್ಳಿ: ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಸರ್.ಸಿ.ವಿ. ರಾಮನ್ ನೆನಪಿನ ಅಂಗವಾಗಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ನೈಪುಣ್ಯತೆ ಮೆರೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿಗಳು ಕೆರೆಕಟ್ಟೆ ನಿರ್ಮಾಣ, ಮನೆಗಳ ನಿರ್ಮಾಣ, ವಿದ್ಯುತ್ ಉತ್ಪಾದನೆ ಹಾಗೂ ವಿದ್ಯುತ್ ಉಳಿತಾಯ ಹೀಗೆ ಹಲವು ಬಗೆಯ ನೈಪುಣ್ಯತೆಗಳನ್ನು ತಮ್ಮ ಕೈಚಳಕದಿಂದ ಮಾಡಿ ತಮ್ಮ ಪೋಷಕರು ಶಿಕ್ಷಕರು, ಇಲ್ಲಿಗೆ ಆಗಮಿಸಿದ ಸಾರ್ವಜನಿಕರು ಬೆರಗಾಗುವಂತೆ ಮಾಡಿದರು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಮು, ಮಕ್ಕಳಲ್ಲಿ ಸರ್.ಸಿ.ವಿ. ರಾಮನ್, ಸರ್.ಎಂ. ವೀಶ್ವರಯ್ಯ ಮತ್ತೆ ಮರುಜನ್ಮ ಪಡೆದಿದ್ದಾರೋನೋ ಎಂದೆನಿಸುತ್ತಿದೆ ಎಂದು ಸಂತೋಷ ವ್ಯಕ್ತ ಪಡಿಸಿದರು. ಉಪನ್ಯಾಸಕ ಲೋಕೇಶ್ ಉಪನ್ಯಾಸ ನೀಡಿದರು. ಮುಖ್ಯಾ ಶಿಕ್ಷಕರಾದ ಎಚ್.ಎಂ. ರಶ್ಮಿ, ಬಿ. ಶಾಂತರಾಜು, ಮಹದೇವಸ್ವಾಮಿ, ಮಹದೇವಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

